11:42 AM Monday23 - March 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ

ಇತ್ತೀಚಿನ ಸುದ್ದಿ

ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

23/03/2026, 11:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚಂಬೆಬೆಳ್ಳೂರು ದೇವಣಗೇರಿ, ಮೈತಾಡಿ ಕದನೂರು ಸುತ್ತಮುತ್ತ ಗ್ರಾಮಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸುತ್ತಿದ್ದ ಆನೆಗಳ ಪೈಕಿ ಒಂಟಿ ಸಲಗದ ಸರಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಆನೆಯನ್ನು ಚೆoಬೆ ಬೆಳ್ಳೂರು ವ್ಯಾಪ್ತಿಯಲ್ಲಿ ಸೆರೆಹಿಡಿಯಲಾಗಿದೆ.
ಬೆಳಗಿನ ಜಾವ ಆರಂಭಗೊಂಡ ಕಾರ್ಯಾಚರಣೆಯಲ್ಲಿ ಕಾಡಾನೆಗಳನ್ನು ಸೆರೆ ಹಿಡಿಯುವಲ್ಲಿ ಅನುಭವ ಹೊಂದಿರುವ ಸಾಕಾನೆಗಳಾದ ಅಭಿಮನ್ಯು ಮಹೇಂದ್ರ ಕಂಜನ್ ನೀಮಾ, ಸುಗ್ರೀವ ಹರ್ಷ ಪಾಲ್ಗೊಂಡು ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣ ವಿರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾರ್ಗದರ್ಶನದಲ್ಲಿ, ವನ್ಯಜೀವಿ ವೈದ್ಯಧಿಕಾರಿ ಡಾ. ರಮೇಶ್,ಶಾರ್ಪ್ ಶೂಟರ್ ಕುಶಾಲ ನಗರ ಉಪ ಅರಣ್ಯ ಅಧಿಕಾರಿ ರಂಜನ್ ಹಾಗೂ ವಿರಾಜಪೇಟೆ ವಲಯ ಅರಣ್ಯ ಅಧಿಕಾರಿ ಗಂಗಾಧರ್, ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ನೂರಕ್ಕೂ ಅಧಿಕ ಮಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆನೆ ಕಾರ್ಯಾಚರಣೆಯನ್ನು ನೋಡಲು ಊರಿನವರು ಕೂಡ ಸಾಕ್ಷಿ ಯಾದರು.


ಕಾರ್ಯಾಚರಣೆ ನಡೆಯುವ ಗ್ರಾಮಗಳ 500 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶ ಎಂದು ತಹಶೀಲ್ದಾರ್ ಪ್ರವೀಣ್ ಕುಮಾರ್ ರವರು ಪ್ರತಿಬಂದಿಕ ಆಜ್ಞೆಯನ್ನು ಹಿಂದೆ ವಿಧಿಸಿದರು.
ಒಟ್ಟಿನಲ್ಲಿ ಈ ಭಾಗದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ನೀಡುತ್ತಿದ್ದ ಒಂಟಿ ಸಲಗ ಇದೀಗ ಸರೆಯಾಗಿದೆ.
ಈ ಭಾಗದ ವಿವಿಧ ಗ್ರಾಮಗಳ ಗ್ರಾಮಸ್ಥರು ಇದೀಗ ಸ್ವಲ್ಪಮಟ್ಟಿಗೆ ರಿಲ್ಯಾಕ್ಸ್ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು