7:57 PM Friday14 - March 2025
ಬ್ರೇಕಿಂಗ್ ನ್ಯೂಸ್
Ex CM | ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ:… ಎಲ್ಲರೂ ಬುದ್ದಿ ಹೇಳೋರೆ ಇರೋದು; ಹೊಸಬರು ಹಿರಿಯ ಮಾತು ಕೇಳಿ ಕಲಿಯಿರಿ: ನೂತನ… ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3… DCM | ತುಂಗಭದ್ರ ಆಣೆಕಟ್ಟಿನ 27 ಟಿಎಂಸಿ ನೀರಿನ ಸದ್ಬಳಕೆಗೆ ಸರಕಾರ ಕ್ರಮ:… Traffic Jam | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಡಬಲ್… Home Minister | ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ:… ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್… Budget Session | ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10… ಕೆಎಎಸ್ ಮರು ಪರೀಕ್ಷೆ ಕೋರ್ಟ್ ಆದೇಶದ ಮೇಲೆ ಅವಲಂಬಿತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tourism | ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಒಂಟಿ ಸಲಗ!: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

14/03/2025, 19:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ರಾತ್ರಿ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಿರುವ ನಲ್ಲೂರಿನಲ್ಲಿ ಒಂಟಿ ಸಲಗ ತಿರುಗಾಡಿದ ಘಟನೆ ಆತಂಕಕ್ಕೆ ಕಾರಣವಾಗಿದೆ.
ನಗರದಿಂದ ಕೇವಲ 2 ಕಿಮೀ ದೂರದಲ್ಲಿಯೇ ಈ ಸಲಗ ಕಂಡು ಬಂದಿದ್ದು, ಇದು ನಗರ ಪ್ರದೇಶಕ್ಕೆ ಪ್ರವೇಶಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ.
ಸಿಸಿಟಿವಿಯಲ್ಲಿ ಸೆರೆ ನಲ್ಲೂರಿನ ವಿವಿಧ ರಸ್ತೆಗಳಲ್ಲೂ ಆನೆ ಸಂಚರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಹಿಂಜರಿದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಹರಸಾಹಸ ಸಲಗವನ್ನು ಕಾಡು ಪ್ರದೇಶಕ್ಕೆ ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಅದನ್ನು ಸುರಕ್ಷಿತವಾಗಿ ಮರಳಿಸಲು ತಕ್ಕ ಮುನ್ನೆಚ್ಚರಿಕೆ ವಹಿಸಲಾಗಿದೆ.
ಸ್ಥಳೀಯರಲ್ಲಿ ಆತಂಕ ಹಠಾತ್ ಆನೆಯ ದರ್ಶನವಾದ ಹಿನ್ನೆಲೆಯಲ್ಲಿ ನಲ್ಲೂರಿನ ನಿವಾಸಿಗಳು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು