9:30 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು: ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ

24/03/2026, 13:31

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು ನಡೆದಿದ್ದು,
ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ಹುಲಿ ದಿಢೀರ್ ದಾಳಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದಿದೆ.
ಹುಲಿ ಸೆರೆಗೆ ಹಮ್ಮಿಕೊಳ್ಳಲಾಗಿದ್ದ ‘ಆಪರೇಷನ್ ಬೀಸ್ಟ್’ ಕಾರ್ಯಾಚರಣೆಯ ಎರಡನೇl ಹಂತ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇll ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅವಘಡವೊಂದು ಸಂಭವಿಸಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ ಅರಣ್ಯ ಸಿಬ್ಬಂದಿ ಕೂಂಬಿಂಗ್ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸದೇ ಇರುವುದರಿಂದ ಸಿಬ್ಬಂದಿಯೊಬ್ಬರ ಪ್ರಾಣಕ್ಕೆ ಸಂಚಕಾರ ಎದುರಾಗಿದ್ದು, ಅದೃಷ್ಟವಶಾತ್l ಅನಾಹುತವೊಂದು ತಪ್ಪಿದೆ. ಹುಲಿಗೆ ಅರವಳಿಕೆ (ಡಾಟ್) ನೀಡಿದ ನಂತರ ಅದುl ಸಂಪೂರ್ಣವಾಗಿ ಪ್ರಜ್ಞೆ ತಪ್ಪುವ ಮುನ್ನವೇ ಸೆರೆl ಹಿಡಿಯಲು ಸಿಬ್ಬಂದಿ ಮುಂದಾಗಿದ್ದರು. ನಿಯಮ ಪ್ರಕಾರ, ಹಿರಿಯ ಅಧಿಕಾರಿಗಳು ಮತ್ತು ಪಶುವೈದ್ಯರl ಮೇಲ್ವಿಚಾರಣೆಯಲ್ಲಿ ಮಾತ್ರ ಮುಂದಿನ ಕ್ರಮ ಕೈಗೊಳ್ಳಬೇಕಾಗಿದ್ದರೂ, ಈ ಸಂದರ್ಭದಲ್ಲಿ ಆತುರದ ನಿರ್ಧಾರ ಕೈಗೊಳ್ಳಲಾಗಿತ್ತುl ಎನ್ನಲಾಗಿದೆ. ಸಿಬ್ಬಂದಿ ಸೆರೆ ಹಿಡಿಯಲು ಬರುತ್ತಿದ್ದಂತೆಯೇ ಗಾಬರಿಗೊಂಡ ಹುಲಿ ರಿವರ್ಸ್ ಅಟ್ಯಾಕ್ ನಡೆಸಿ, ಫಾರೆಸ್ಟ್ ಗಾರ್ಡ್ ಬಸವೇಗೌಡ ಮೇಲೆl ದಾಳಿ ನಡೆಸಿದೆ. ಹುಲಿಯ ಒಂದೇ ಹೊಡೆತಕ್ಕೆ ಅವರ ಕೈಗೆ ಗಂಭೀರ ಗಾಯವಾಗಿದೆ.
ಕಾರ್ಯಾಚರಣೆ ವೇಳೆ ಸ್ಥಳದಲ್ಲಿದ್ದ ಜನರ ಕೂಗಾಟ ಮತ್ತು ಗದ್ದಲದಿಂದ ಹುಲಿ ಇನ್ನಷ್ಟು ಗಾಬರಿಗೊಂಡಿತ್ತು. ಅರವಳಿಕೆ ಮದ್ದು ನೀಡಿದ ಬಳಿಕವೂ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿರಲಿಲ್ಲ ಎಂಬುದು ತಿಳಿದುಬಂದಿದೆ.l ಗಾಯಗೊಂಡ ಫಾರೆಸ್ಟ್ ಗಾರ್ಡ್ ಬಸವೇಗೌಡರನ್ನು ತಕ್ಷಣವೇ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಹಿರಿಯ ಅಧಿಕಾರಿಗಳು ಸ್ಥಳದಲ್ಲಿರದೇ ಕಾರ್ಯಾಚರಣೆ ನಡೆಸಿದ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಯ ಕಾರ್ಯವಿಧಾನಗಳ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಒಟ್ಟಿನಲ್ಲಿ, ಕಾಡುಪ್ರಾಣಿಗಳ ಸೆರೆ ಕಾರ್ಯಾಚರಣೆಯಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳನ್ನು ಲೆಕ್ಕಿಸದ ಪರಿಣಾಮ ಈ ಅವಘಡ ಸಂಭವಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ.

ಜಾಹೀರಾತು