5:04 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಹೊಸ ಸಚಿವ ಸಂಪುಟವೂ ರಚನೆಯಾಗಬಹುದು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

10/10/2025, 22:27

ಮಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಚಿವ ಸಂಪುಟ ಪುನರ್ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ ಸಚಿವ ಸಂಪುಟವೂ ಆಗಬಹುದು. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ಔತಣ ಕೂಟಕ್ಕೆ ಕರೆದಿದ್ದಾರೆ. ನನ್ನನ್ನೂ ಬರಬೇಕು ಎಂದು ಕರೆದಿದ್ದಾರೆ. ಅಲ್ಲಿ ಏನಾಗುತ್ತೋ ನೋಡೋಣ ಎಂದರು.
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಈಗಾಗಲೇ ಸ್ಪಷ್ಟವಾಗಿ ಹೇಳಿದೆ. ಈಗ ಮುಖ್ಯಮಂತ್ರಿ ಇದ್ದಾರೆ. ಪಕ್ಷದ ಹೈಕಮಾಂಡ್, ಹಿರಿಯ ಮುಖಂಡರು ನಿರ್ಧಾರ ಕೈಗೊಳ್ಳಲಿದ್ದಾರೆ. ಅವರ ತೀರ್ಮಾನ ಅಂತಿಮ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ನಾಯಕ ಹಾಗೂ ಜನಪ್ರಿಯ ನಾಯಕ ಎಂದರು.
ಡಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್
ಕುಮಾರ್ ಅವರು ದೀರ್ಘಕಾಲದಿಂದ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿದ್ದು, ಪ್ರಸ್ತುತ ಮೆಸ್ಕಾಂ ಅಧ್ಯಕ್ಷರಾಗಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಯಾವುದೇ ಹಸ್ತಕ್ಷೇಪ ಇಲ್ಲದೆ, ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದೆ. ಯಾವುದೇ ಒತ್ತಡಕ್ಕೆ ಮಣಿಯಬೇಕಿಲ್ಲ. ನನಗೆ ಎಸ್‌ಐಟಿ ಬಗ್ಗೆ ಪೂರ್ತಿ ವಿಶ್ವಾಸವಿದೆ. ನನಗಿರುವ ಮಾಹಿತಿಯಂತೆ ಸ್ವಲ್ಪಮಟ್ಟಿನ ಷಡ್ಯಂತ್ರ ನಡೆದಿದೆ. ಈ ಬಗ್ಗೆ ಯಾವ ಸಾಕ್ಷ್ಯ ಇದೆ ಎಂಬುದನ್ನು ಎಸ್‌ಐಟಿ ಹೇಳಬೇಕಿದೆ. ಅಗತ್ಯವಿದ್ದರೆ ಎಸ್‌ಐಟಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು