9:32 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

6 ದಶಕಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ತಾರೆ: ಹಿರಿಯ ನಟಿ ಬಿ. ಸರೋಜಾದೇವಿ ಇನ್ನಿಲ್ಲ

14/07/2025, 15:47

ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಇಂದು (ಜುಲೈ 14) ನಿಧನರಾದರು.


ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು.
2019ರಲ್ಲಿ ಬಿಡುಗಡೆಯಾದ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು.
ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್​ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು