8:45 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

22/06/2026, 20:38

ಹಾಸನ(reporterkarnataka.com): ಟಿ.ನರಸೀಪುರದ ಈ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಬಂಧು-ಬಳಗ ಎಲ್ಲರೂ ಖುಷಿಯಿಂದ ಮದುವೆ ಕಾರ್ಯದಲ್ಲಿ ಭಾಗಿಯಾಗಿದ್ದರು.ಆದರೆ ಯುವಕನೊಬ್ಬನ ಬೆದರಿಕೆಗೆ ಒಂದೇ ಕುಟುಂಬದ ಮೂವರು ಆತಹತ್ಯೆ ಮಾಡಿಕೊಂಡಿದ್ದು ಮದುವೆ ಮನೆ ಸೂತಕದ ಮನೆಯಾಗಿಬಿಟ್ಟಿದೆ. ಯುವಕನ ಬೆದರಿಕೆಗೆ ತಂದೆ,ತಾಯಿ ಹಾಗೂ ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಿಕ ಘಟನೆ ತಾಲ್ಲೂಕಿನ ಕೆಂಪಯ್ಯನಹುಂಡಿಯಲ್ಲಿ ನಡೆದಿದ್ದು, ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.
ತಂದೆ ಶಿವಣ್ಣ, ತಾಯಿ ನಾಗರತ್ನ ಹಾಗೂ ಮಗಳು ರಕ್ಷತಾ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ ದುರ್ದೈವಿಗಳು.

*ಇಷ್ಟಕ್ಕೂ ಆಗಿದ್ದೇನು?:*
ರಕ್ಷತಾಗೆ ಮದುವೆ ನಿಶ್ಚಯವಾಗಿದ್ದು ಗುರುವಾರ -ಶುಕ್ರವಾರ ಹಸೆಮಣೆ ಏರಬೇಕಾಗಿತ್ತು. ಆದರೆ ಅದೇ ಗ್ರಾಮದ ಯುವಕನೊಬ್ಬ ಯುವತಿಯನ್ನು ಇಷ್ಟಪಡುತ್ತಿದ್ದ ಎನ್ನಲಾಗಿದ್ದು, ಒಂದು ವೇಳೆ ನೀನು ಬೇರೆ ಯುವಕನೊಂದಿಗೆ ಮದುವೆಯಾದರೆ ಕಲ್ಯಾಣ ಮಂಟಪದ ಬಳಿ ಬಂದು ಗಲಾಟೆ ಮಾಡುತ್ತೇನೆಂದು ಬೆದರಿಕೆ ಸಂದೇಶ ಕಳುಹಿಸಿದ್ದಾನೆ.
ಇದರಿಂದ ಇಡೀ ಕುಟುಂಬವೇ ಆಂತಕದಲ್ಲಿತ್ತು. ಮದುವೆ ಮಂಟಪದಲ್ಲಿ ಗಲಾಟೆ ನಡೆದರೆ ಮಾನ ಮಾರ್ಯದೆ ಹೋಗುತ್ತದೆ ಎಂದು ಹೆದರಿದ್ದು, ನಮ್ಮ ಆತಹತ್ಯೆಗೆ ಆ ಯುವಕನೇ ಕಾರಣವೆಂದು ಆರೋಪಿಸಿ ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲೇ ವಿಷ ಸೇವಿಸಿ ಮೂವರು ಕೂಡ ಆತಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದು ಟಿ.ನರಸೀಪುರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು