10:45 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಆ ಬಾರ್ ಮುಂದೆ ವರ್ಷದೊಳಗೆ 7ಕ್ಕೂ ಹೆಚ್ಚು ಹೆಣ ಬಿತ್ತು!: ಹಾಗಾದರೆ ಆ ಬಾರ್ ಇರುವುದು ಎಲ್ಲಿ? ಸ್ಥಳೀಯರ ಆಗ್ರಹ ಏನು?

14/08/2022, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಬಾರ್ ಓಪನ್ ಆಗಿ ಒಂದೇ ವರ್ಷದಲ್ಲಿ ಬಾರ್ ಮುಂದೆಯೇ ಅಪಘಾತದಿಂದ 7ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನರು ಕೂಡಲೇ ಬಾರ್ ಬಂದ್ ಮಾಡುವಂತೆ ಬಾರ್ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಸಮೀಪದ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೊನ್ನೆ ಮೊನ್ನೆ ಇದೇ ಬಾರ್‍ನಿಂದ ಹೊರಬಂದು ಇಬ್ಬರು ಯುವಕರಿಗೆ ಟಿಪ್ಪರ್ ಲಾರಿ ಡಿಕ್ಕಿಯೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದ ಜನ ಕೂಡಲೇ ಬಾರ್ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ. ಇಂದು ಊರಿನ ಜನ ಬಾರ್ ಮುಂದೆ ಪ್ರತಿಭಟನೆ ನಡೆಸಿ ಬಾರ್ ಕ್ಲೋಸ್ ಮಾಡುವಂತೆ ಆಗ್ರಹಿಸಿದ್ದಾರೆ.


ಈ ವೇಳೆ, ಬಾರ್ ಮಾಲೀಕರು, ಸ್ಥಳಿಯರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಕೂಡ ನಡೆದಿದೆ. ಸ್ಥಳಕ್ಕೆ ಅಬಕಾರಿ ಇಲಾಖೆ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪ್ರತಿಭಟನಾನಿರತರನ್ನು ಸಮಾಧಾನ ಮಾಡಿದ್ದಾರೆ. ಮುಂದಿನ 10 ದಿನಗಳವರೆಗೆ ಬಾರ್ ಓಪನ್ ಮಾಡದಂತೆ ಬಾರ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. 10 ದಿನಗಳ ಒಳಗೆ ಬಾರನ್ನ ಸ್ಥಳಾಂತರಿಸುವುದಾಗ ಸ್ಥಳಿಯರಿಗೆ ಭರವಸೆ ನೀಡಿದ್ದಾರೆ. ಸ್ಥಳಿಯರು ಕೂಡ ತಾತ್ಕಾಲಿಕವಾಗಿ ಪ್ರತಿಭಟನೆಯನ್ನ ಹಿಂಪಡೆದಿದ್ದಾರೆ. 10 ದಿನಗಳಲ್ಲಿ ಬಾರ್ ಕ್ಲೋಸ್ ಆಗಬೇಕು ಅಥವ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಬಾರ್ ಮತ್ತೆ ಓಪನ್ ಆದರೆ ಹೋರಾಟದ ರೂಪುರೇಷೆಯನ್ನ ಬದಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು