ಇತ್ತೀಚಿನ ಸುದ್ದಿ
ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ
28/02/2023, 21:35
ಮಂಡ್ಯ(reporterkarnataka.com): ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ 28ರಿಂದ ಮಾರ್ಚ್ 8 ರವರೆಗೆ ನಡೆಯುವ ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ನಾಂದಿ ಪೂಜೆ ಮತ್ತು ಧರ್ಮಧ್ವಜ ಸ್ಥಾಪನೆ ಹಾಗೂ ಸಭಾ ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಚಾಲನೆ ನೀಡಿದರು.
ಸಮಾರಂಭದಲ್ಲಿ ಹಂಪಿಯ ಶ್ರೀ ಗಾಯತ್ರಿ ಪೀಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ದಯಾನಂದಪುರಿ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ, ವಾಗ್ಮಿಗಳಾದ ಶ್ರೀ ಶಿವರಾಮ ಅಗ್ನಿಹೋತ್ರಿ ಮುಂತಾದವರು ಉಪಸ್ಥಿತರಿದ್ದರು.