9:51 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಪಟ್ಟಾಭಿಷೇಕ ದಶಮಾನೋತ್ಸವ

21/02/2023, 20:24

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದ ನಾಥ ಸ್ವಾಮೀಜಿಯವರ ಹತ್ತನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀಗಳಿಗೆ ಕಿರೀಟ, ಕಂಠಿಹಾರ ಹಾಗೂ ಶಾಲು ಹೊದಿಸುವ ಮೂಲಕ ಪುಷ್ಪಾರ್ಚನೆ ಮಾಡಿ ದಶಮಾನೋತ್ಸವದ ಪಟ್ಟಾಭಿಷೇಕ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಸಾಧು ಸಂತರು ಗಣ್ಯರು ಹಾಜರಿದ್ದರು. ಆದಿಚುಂಚನಗಿರಿ ಕ್ಷೇತ್ರದ ಎರಡು ದಿನಗಳ ಕಾಲ ನಡೆದ ಜ್ಞಾನವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಶೀಗಳ 10ನೇ ವರ್ಷದ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವಕ್ಕೆ ಸೋಮವಾರ ಸಂಜೆ ಕಾರ್ಯಕ್ರಮ ಮುಕ್ತಾಯವಾಯಿತು.

ಕ್ಷೇತ್ರದ ಆದಿಶಕ್ತಿ ಮತ್ತು ಶಿವಶಕ್ತಿ ಸಮುದಾಯ ಭವನಗಳಲ್ಲಿ ಆಯೋಜನೆ ಮಾಡಿದ ಮೇಳವನ್ನು ಸಾವಿರಾರು ವಿದ್ಯಾರ್ಥಿಗಳು ವೀಕ್ಷಿಸಿದರು. ಮೇಳದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹೊಸ ಹೊಸ ಆವಿಷ್ಕಾರಗಳು ಹಾಗೂ ಸಾರ್ವಜನಿಕರು ಜನಮನಗೊಂಡವು.

ಇದೇ ಸಂದರ್ಭದಲ್ಲಿ ಹಲವು ವಿಜ್ಞಾನಿಗಳು ಪಾಲ್ಗೊಂಡು ಪ್ರಸ್ತುತ ಮತ್ತು ಮುಂದಿನ ವಿಜ್ಞಾನದ ಆವಿಷ್ಕಾರಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ವಿಜ್ಞಾನಕ್ಕೆ ಸಂಬಂಧಿಸಿದಂತ ಯುವ ವಿಜ್ಞಾನಿಗಳಿಗೆ ಹಲವು ವಿಚಾರ ಸಂಕೀರ್ಣಗಳು ನಡೆದು ನಡೆದವು ಅನೇಕ ಮಂದಿ ವಿಜ್ಞಾನ ವಿದ್ಯಾರ್ಥಿಗಳು ಮೇಳದ ಉಪಯೋಗ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು