8:38 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ 

14/08/2021, 10:12

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್ರಾಸ್ತವಿಕ ಮಾತನಾಡಿ, ನಾವು ನ್ಯಾಯ, ವೈದ್ಯಶಾಸ್ತ್ರ ವಿಭಾಗದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಪ್ರಾರಂಭಿಸಿದ್ದೇವೆ. ಇದಕ್ಕೆ ಕೆಲವು ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೇ ನಮಗೆ ಸ್ಪೂರ್ತಿದಾಯಕ ಎಂದು ಹೇಳಿದರು.

ಈ ಕೇಂದ್ರ ಯಶಸ್ವಿಯಾಗಿ ಕಾಯನಿರ್ವಹಿಸಲು ಪ್ರೇರಕವಾಗಿ, ಪೂರಕವಾಗಿ ಹಾಗೂ ಪ್ರೋತ್ಸಾಹಕವಾಗಿ ಸುಸಜ್ಜಿತ ಪ್ರಯೋಗಾಲಯವಿದೆ. ಈ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮವು ಯಶಸ್ವಿಯಾಗಿ ಇದರ ಪ್ರಯೋಜನ ಎಲ್ಲರಿಗೂ ಲಭಿಸಲಿ ಎಂದು ನುಡಿದರು. 

ನ್ಯಾಯ ವೈದ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೋಮಶೇಖರ್ ಸಿ., ಅತಿಥಿ ಉಪನ್ಯಾಸಕರಾದ ಡಾ. ಶಂಕರ್ ಎಂ. ಬಕಣ್ಣನವರ್ ಅವರನ್ನು ಪರಿಚಯಿಸಿದರು. 

ಮಣಿಪಾಲ್ ಉನ್ನತ ಶಿಕ್ಷಣ ಸಂಸ್ಥೆಯ ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಂಕರ್ ಎಂ. ಬಕಣ್ಣನವರ್ ತಮ್ಮ ಅತಿಥಿ ಉಪನ್ಯಾಸದಲ್ಲಿ ಚಿಕಿತ್ಸಾ ವಿಷ ಶಾಸ್ತ್ರದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷವಾಗಿ ಉಪನ್ಯಾಸ ನೀಡಿದರು.

ದೇಶದಲ್ಲಿ ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ವಿಷ ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ ಅವರು, ಈ ಕೆಂದ್ರದಿಂದ ವಿಷಸೇವನೆ ಆಗುವುದನ್ನು ತಡೆಗಟ್ಟುವುದು ಹಾಗೂ ವಿಷಸೇವನೆ ಆದವರಿಗೆ ಸರಿಯಾದ ಚಿಕಿತ್ಸೆ ಸಿಗುವಂತಾಗಿ ಗುಣಮುಖರಾಗಬೇಕೆಂದು ತಾರ್ಕಿಕವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಗಣ್ಯರನ್ನು ನ್ಯಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಸ್ವಾಗತಿಸಿದರು. ನ್ಯಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು