10:20 PM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಆಮ್ ಆದ್ಮಿ ಪಾರ್ಟಿ: ರಾಜ್ಯದಲ್ಲಿ 107 ಮಂದಿ ಕೋಟ್ಯಧಿಪತಿಗಳು!: 48 ಮಂದಿ ಕ್ರಿಮಿನಲ್ ಪ್ರಕರಣವಿರುವ ಅಭ್ಯರ್ಥಿಗಳು ಸ್ಪರ್ಧೆ!

04/05/2023, 23:57

ಬೆಂಗಳೂರು(reporterkarnataka.com): ಬಡವರ, ಜನಸಾಮಾನ್ಯರ ಪಕ್ಷವೆಂದೇ ಬಿಂಬಿಸಿ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಹಾಗೆ 107 ಮಂದಿ ಕೋಟ್ಯಧಿಪತಿಗಳು ವಿಜಯಕ್ಕಾಗಿ ಹೆಣಗಾಡುತ್ತಿದ್ದಾರೆ.

ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯದಲ್ಲಿ ಒಟ್ಟು 208 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ 107 ಮಂದಿ ಕೋಟ್ಯಧಿಪತಿಗಳು ಅಖಾಡಕ್ಕಿಳಿದಿದ್ದಾರೆ. ಹಾಗೆ ಬಿಜೆಪಿಯಿಂದ 216, ಕಾಂಗ್ರೆಸ್ ನಿಂದ 215, ಜನತಾ ದಳದಿಂದ 170 ಮಂದಿ ಕೋಟ್ಯಧಿಪತಿಗಳು ಕಣದಲ್ಲಿ ಸೆಣಸಾಡುತ್ತಿದ್ದಾರೆ. 60ಕ್ಕೂ ಹೆಚ್ಚು ಅಭ್ಯರ್ಥಿ ಗಳು 100 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಒಟ್ಟಾರೆ ಪ್ರತಿ ಅಭ್ಯರ್ಥಿ ಯ ಸರಾಸರಿ ಆಸ್ತಿ 12.26 ಕೋಟಿ ರೂ. ಆಗಿರುತ್ತದೆ.
ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿಗಳ ಪೈಕಿ 581 ಮಂದಿ ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇವರಲ್ಲಿ ಆಡಳಿತರೂಢ ಬಿಜೆಪಿ, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ಮತ್ತು ಜನತಾ ದಳದ ಅಭ್ಯರ್ಥಿಗಳು ಕೂಡ ಸೇರಿದ್ದಾರೆ.
ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 581 ಆಭ್ಯರ್ಥಿಗಳಲ್ಲಿ 404 ಮಂದಿ ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. 49 ಅಭ್ಯರ್ಥಿ ಗಳು ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಎದುರಿಸುತ್ತಿದ್ದಾರೆ. ಬಿಜೆಪಿಯ 96 ಅಭ್ಯರ್ಥಿಗಳು, ಕಾಂಗ್ರೆಸ್ ನ 122 ಅಭ್ಯರ್ಥಿಗಳು, ಜನತಾ ದಳದ 70 ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವೆಂದರೆ ಜನಸಾಮಾನ್ಯರ ಪಕ್ಷ ಎಂದು ಕರೆಸಿಕೊಳ್ಳುವ ಆಮ್ ಆದ್ಮಿ ಪಾರ್ಟಿಯು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು