2:25 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆನೆ ದಂತ ಮಾರಾಟ ಯತ್ನ: 5 ಮಂದಿ ಸೆರೆ; ಜೂ 18 ರವರೆಗೆ ನ್ಯಾಯಾಂಗ ಬಂಧನ 

08/06/2022, 13:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇಲ್ಲಿಗೆ ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ .

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ . ಶಿವಕುಮಾರ್,ಮಸ್ಕಲ್  ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ  ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ  ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.

ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ .ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು