1:29 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಆನೆ ಸಂಚಾರ: ಡಿಸಿ, ಎಸ್ಪಿ, ಪಂಚಾಯಿತಿಗೆ ಸಕಾಲಿಕ ಮಾಹಿತಿ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

15/02/2025, 15:23

ಆನೆಗಳ ಚಲನವಲನ ತಿಳಿಯಲು ಥರ್ಮಲ್‌ ಕ್ಯಾಮರಾ ಬಳಸಲು ಸೂಚನೆ

ಬೆಂಗಳೂರು(reporterkarnataka.com): ಕಾಡಿನಂಚಿನ ಗ್ರಾಮಗಳಿಗೆ ನುಗ್ಗಿ ಜೀವಹಾನಿ, ಬೆಳೆ ಹಾನಿ ಮಾಡುವ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸಕಾಲಿಕ (ರಿಯಲ್‌ ಟೈಮ್) ಮಾಹಿತಿಯನ್ನು ಸ್ಥಳಿಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಪಂಚಾಯ್ತಿಗಳ ಅಧ್ಯಕ್ಷರು, ಕಾರ್ಯದರ್ಶಿ, ಪಿಡಿಒ ಮತ್ತು ಗ್ರಾಮದ ಮುಖ್ಯಸ್ಥರಿಗೆ ನೀಡುವ ಮೂಲಕ ಜೀವಹಾನಿ ತಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಫೆ.೧೩ರಂದು ರಾಜ್ಯದಲ್ಲಿ ಒಂದೇ ದಿನ ಆನೆ ದಾಳಿಯಿಂದ ಮೂರು ಅಮೂಲ್ಯ ಜೀವಗಳ ಹಾನಿ ಆಗಿರುವ ಹಿನ್ನೆಲೆಯಲ್ಲಿ ಇಂದು ಎಲ್ಲ ಜಿಲ್ಲೆಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ತುರ್ತು ವರ್ಚುವಲ್‌ ಸಭೆ ನಡೆಸಿದ ಅವರು, ಆನೆ ಹಾವಳಿ ನಿಯಂತ್ರಿಸಲು ಎಲ್ಲ ಸಾಧ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಪ್ರಸ್ತುತ ದೇಶೀಯವಾಗಿ ಅಭಿವೃದ್ಧಿಪಡಿಸಿದ ರೇಡಿಯೋ ಕಾಲರ್‌ ಕೂಡ ಲಭ್ಯವಿದ್ದು, ಗುಂಪಿನಲ್ಲಿರುವ ಆನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಿ, ಥರ್ಮಲ್‌ ಕ್ಯಾಮರಾ ಬಳಸಿ ಆನೆಗಳ ಚಲನವಲನದ ಬಗ್ಗೆ ನಿಗಾ ಇಟ್ಟು, ಮಾಹಿತಿಯನ್ನು ಬಲ್ಕ್‌ ಎಸ್.ಎಂ.ಎಸ್. ಮೂಲಕ ಸಕಾಲಿಕವಾಗಿ ನೀಡುವ ವ್ಯವಸ್ಥೆ ಮಾಡುವಂತೆ ತಿಳಿಸಿದರು.
೨೦೨೨-೨೩ರ ಸಾಲಿನಲ್ಲಿ ರಾಜ್ಯದಲ್ಲಿ ಆನೆಯಿಂದ ೩೨ ಜನರು ಸಾವಿಗೀಡಾಗಿದ್ದರೆ, ೨೦೨೩-೨೪ರಲ್ಲಿ ೪೮ ಸಾವು ಸಂಭವಿಸಿದೆ, ಈ ವರ್ಷ ಇಲ್ಲಿಯವರೆಗೆ ೩೦ ಜೀವಹಾನಿ ಆಗಿದೆ. ಫೆಬ್ರವರಿ, ಮಾರ್ಚ್‌, ಏಪ್ರಿಲ್‌ ಹಾಗೂ ಜುಲೈನಲ್ಲಿ ಹೆಚ್ಚಿನ ಸಾವು ಸಂಭವಿಸುತ್ತಿದೆ ಇದಕ್ಕೆ ಕಾರಣವೇನು ಎಂಬ ಬಗ್ಗೆ ಅಧ್ಯಯನ ನಡೆಸಿ ಎಂದು ತಿಳಿಸಿದರು.
*ಆವಾಸಸ್ಥಾನ ಅಭಿವೃದ್ಧಿಗೆ ಸೂಚನೆ:*
ಆನೆಗಳು ನೀರು ಮತ್ತು ಆಹಾರ ಅರಸಿ ಊರಿಗೆ ಬರುತ್ತಿದ್ದು, ಕಾಡಿನಲ್ಲೇ ಆನೆಗಳಿಗೆ ಆಹಾರ ಲಭಿಸುವಂತೆ ಮಾಡಲು ಮತ್ತು ಸ್ಥಳೀಯರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ತಿಳಿಸಿದರು.
ಗ್ರಾಮಸ್ಥರು ಮತ್ತು ಅರಣ್ಯ ಸಿಬ್ಬಂದಿಯ ನಡುವೆ ಡಿಜಿಟಲ್‌ ಸಂಪರ್ಕ ವೃದ್ಧಿಸಲು ಸೂಚಿಸಿದ ಸಚಿವರು, ಆನೆಗಳು ಊರಿನ ಬಳಿ ಕಾಣಿಸಿಕೊಂಡಾಗ ತ್ವರಿತವಾಗಿ ಸ್ಪಂದಿಸುವಂತೆ ತಿಳಿಸಿದರು.
ವಿರಾಜಪೇಟೆಯ ಪುಂಡಾನೆ ಸೆರೆಗೆ ತಂಡ ಕಳಿಸಲು ಸೂಚನೆ:
ವಿರಾಜ ಪೇಟೆಯಲ್ಲಿ ಪುಂಡಾನೆ ಪದೆ ಪದೆ ಜನರ ಮೇಲೆ ದಾಳಿ ಮಾಡುತ್ತಿದ್ದು, ಇಂತಹ ಆನೆಗಳಿಗೆ ಅರವಳಿಕೆ ನೀಡಿ ಸೆರೆ ಹಿಡಿಯಲು ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
*ರೈಲ್ವೆ ಬ್ಯಾರಿಕೇಡ್‌ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ:*
ಆನೆಗಳ ಉಪಟಳ ಹೆಚ್ಚಿರುವ ಪ್ರದೇಶಗಳಲ್ಲಿ ತ್ವರಿತವಾಗಿ ರೈಲ್ವೆ ಬ್ಯಾರಿಕೇಡ್‌ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸೂಚಿಸಿದ ಸಚಿವರು, ಟೆಂಟಕಲ್‌ ಫೆನ್ಸಿಂಗ್‌, ಆನೆ ಕಂದಕ ಮತ್ತು ಸೌರಬೇಲಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಣೆ ಮಾಡುವಂತೆ ನೋಡಿಕೊಳ್ಳಲು ತಿಳಿಸಿದರು.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್‌ ಮಲ್ಕಡೆ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಾಶ್ವತಿ ಮಿಶ್ರ, ಮನೋಜ್‌ ರಾಜನ್‌, ಪಿ.ಸಿ. ರೇ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಆನೆಗಳ ಸಂಖ್ಯೆ ಮತ್ತು ಆನೆಗಳಿಂದ ಸಂಭವಿಸುವ ಸಾವಿನ ಪ್ರಮಾಣಕ್ಕೆ ಹೋಲಿಸಿದರೆ ಒಡಿಶಾ, ಪಶ್ವಿಮ ಬಂಗಾಳ, ಜಾರ್ಖಂಡ್‌, ಛತ್ತೀಸ್‌ ಗಢ, ಅಸ್ಸಾಂ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಸಾವಿನ ಸಂಖ್ಯೆ ಅತ್ಯಲ್ಪ ಎಂದು ಅರಣ್ಯ ಸಚಿವರಿಗಿಂದು ತಿಳಿಸಲಾಯಿತು.
ಫೆ.೧೩ರಂದು ಒಂದೆ ದಿನ ಆನೆಗಳಿಂದ ರಾಜ್ಯದಲ್ಲಿ ೩ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವರ ನೀಡಿದ ಅಧಿಕಾರಿಗಳು, ೨೦೧೯-೨೩ರ ನಡುವಿನ ೫ ವರ್ಷಗಳ ಅವಧಿಯಲ್ಲಿ ೬೩೯೫ ಆನೆಗಳಿರುವ ಕರ್ನಾಟಕದಲ್ಲಿ ೧೬೦ ಸಾವು ಸಂಭವಿಸಿದೆ, ಆದರೆ ಛತ್ತೀಸಗಢದಲ್ಲಿ ಇರುವುದೇ ೨೪೭ ಆನೆ ಆದರೆ, ಅಲ್ಲಿ ಆನೆಗಳಿಂದ ಇದೇ ೫ ವರ್ಷದ ಅವಧಿಯಲ್ಲಿ ೩೧೩ ಸಾವು ಸಂಭವಿಸಿದೆ ಎಂದು ತಿಳಿಸಿದರು.
ಒಡಿಶಾದಲ್ಲಿ ೧೯೭೬ ಆನೆಗಳಿದ್ದು ಅಲ್ಲಿ ೨೦೧೯-೨೩ರ ಅವಧಿಯಲ್ಲಿ ೬೨೪ ಜನರು ಮೃತಪಟ್ಟಿದ್ದರೆ, ೭೦೦ ಆನೆ ಇರುವ ಪಶ್ಚಿಮ ಬಂಗಾಳದಲ್ಲಿ ೪೩೬ ಸಾವು ಸಂಭವಿಸಿದೆ. ೨೭೬೧ ಆನೆಗಳಿರುವ ತಮಿಳುನಾಡಿನಲ್ಲಿ ಇದೆ ಅವಧಿಯಲ್ಲಿ ೨೫೬ ಮಂದಿ ಸಾವಿಗೀಡಾಗಿದ್ದರೆ, ೧೭೯೩ ಆನೆಗಳಿರುವ ಕೇರಳದಲ್ಲಿ ೧೨೪ ಜನರು ಮೃತಪಟ್ಟಿದ್ದಾರೆ ಎಂಬ ಅಂಕಿ ಅಂಶ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು