ಇತ್ತೀಚಿನ ಸುದ್ದಿ
ಅರಗ ಜ್ಞಾನೇಂದ್ರ ಶಾಸಕ ಸ್ಥಾನ ಅನರ್ಹಗೊಳಿಸಿ ತಕ್ಷಣ ಬಂಧಿಸಿ: ಸ್ಪೀಕರ್ ಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ
10/08/2023, 12:54
ಬೆಂಗಳೂರು(reporterkarnataka.com): ವರ್ಣಬೇಧ, ಜನಾಂಗೀಯ ನಿಂದನೆ ಹಾಗೂ ಪ್ರಾಂತ್ಯವಾರು ಬೇಧ ಮಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸುವಂತೆ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ
ಮನವಿ ಸಲ್ಲಿಸಿದೆ.
ಆಗಸ್ಟ್ 1ರಂದು ತೀರ್ಥಹಳ್ಳಿ ಶಾಸಕರೂ ಆಗಿರುವ ಆರಗ ಜಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ರಾಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಣರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ವಿರುದ್ಧ ವರ್ಣಭೇದ, ಜನಾಂಗೀಯ ನಿಂದನೆ ಮತ್ತು ಪ್ರಾಂತ್ಯವಾರು ಭೇದವನ್ನುಂಟು ಮಾಡುವ ಹೇಳಿಕೆ ನೀಡಿದ್ದಾರೆ. ಈ ಕುರಿತ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 2ರಂದು ದೂರು ದಾಖಲು ಮಾಡಲಾಗಿದೆ. ಆದರೆ ಅರಗ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ವೀರಶೈವ ಲಿಂಗಾಯತ ಭವನದಲ್ಲಿ ನಡೆದ ಮಹಾಸಭೆಯು ಉಗ್ರವಾಗಿ ಖಂಡಿಸುತ್ತದೆ. ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು
ಎಂದು ಮಹಾಸಭಾದ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ತಿಳಿಸಿದ್ದಾರೆ.
.