8:26 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ, ಪೋಷಕರ ಸಭೆ

29/06/2022, 20:46

ಮಂಗಳೂರು(reporterkarnataka.com): ರಾಜ್ಯ ಅಲ್ಪಸಂಖ್ಯಾತ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ ಸಹಯೋಗದಲ್ಲಿ ಉಳ್ಳಾಲ ತಾಲೂಕಿನ ಕೊಣಾಜೆ ಗ್ರಾಮದ ಅಸೈಗೋಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಂಗಳವಾರ ಶಿಕ್ಷಕರೊಂದಿಗೆ ಶೈಕ್ಷಣಿಕ ಸಮಾಲೋಚನ ಸಭೆ ಹಾಗೂ ಪೋಷಕರ ಸಭೆ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಶಾಸಕ  ಯು.ಟಿ. ಖಾದರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವನ್ನು ವಿತರಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳನ್ನು ಒಂದುಗೂಡಿಸಿ , 2022-23ನೇ ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್‌ ಕಲಾಂ ವಸತಿ ಶಾಲೆ ಎಂದು ಮರುನಾಮಕರಣಗೊಳಿಸಲಾಯಿತು. 6ರಿಂದ 12 ನೇ ತರಗತಿವರೆಗೆ ಕೇಂದ್ರಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(CBSE)ಯಿಂದ ಮಾನ್ಯತೆ ಪಡೆದಿದ್ದು, ಈ ವಸತಿ ಶಾಲೆಯು ಗರಿಷ್ಠ 530 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೊಂದಿದೆ. 

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 6ಯಿಂದ  12 ನೇ ತರಗತಿವರೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ವಸತಿ ಶಾಲೆಯಲ್ಲಿ ಪಠ್ಯ ಪುಸ್ತಕ, ಸ್ಟೇಷನರಿ ವಸ್ತುಗಳು, ಸಮವಸ್ತ್ರ, ಶೂ, ಸಾಕ್ಸ್, ಸೋಪ್ ಕಿಟ್ ಹಾಗೂ ಇತರ ಎಲ್ಲಾ ಅವಶ್ಯಕ ಸಾಮ್ರಗಳನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡಲಾಗುತ್ತಿದೆ.

ಪ್ರವೇಶಾತಿಯಲ್ಲಿ 75 % ಅಲ್ಪಸಂಖ್ಯಾತರು ಮತ್ತು 25% ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಗೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮಧ್ಯೆ 15 ರವರೆಗೂ ಪ್ರವೇಶಾತಿ ಪಡೆಯಬಹುದಾಗಿದೆಎಂದು  ಅವರು ಹೇಳಿದರು

ಕಾರ್ಯಕ್ರಮದಲ್ಲಿ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾದ ದರ್ಶಿನಿ ಕೆ.ಡಿ 573 (91.68%), ಸರಕಾರಿ ಮುಸ್ಲಿಂ ವಸತಿ ಶಾಲೆಯ ವಿದ್ಯಾರ್ಥಿಯಾದ ಇಬ್ರಾಹಿಂ 577 (92.32%) ಹಾಗೂ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ವಿನಿ. ಕೆ. 561 (93.5%), ಬಿಸ್ಮಯ 561 (93.5%) ಇವರನ್ನು ಶಾಸಕರ ಯು.ಟಿ.ಖಾದ‌ರ್ ಸನ್ಮಾನಿಸಿದರು.  

ಮುಖ್ಯ ಅತಿಥಿಗಳಾದಂತಹ ರಾಮಕೃಷ್ಣ ಪ್ರೌಢ ಶಾಲೆ ಪರೇಕಳ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯ  ರವೀಂದ್ರ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಜೀವನವನ್ನು ರೂಪಿಸಿಕೊಳ್ಳುವುದರ ಕುರಿತು ಹಾಗೂ ಪೋಷಕರಿಗೆ ತಮ್ಮ ಮಕ್ಕಳ ವಿದ್ಯಾಭ್ಯಾಸದ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು. 

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿ ಅಂಜನಪ್ಪ ಎಸ್.,  ಗ್ರಾಮ ಪಂಚಾಯತ್‌ ಅಧ್ಯಕ್ಷೆ ಚಂಚಲಾಕ್ಷಿ, ಕೊಣಾಜೆ ಗ್ರಾಮ ಪಂಚಾಯತ್‌ ಸದಸ್ಯ ನಝೀರ್, ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗಪ್ರಸಾದ್ ರೆಡ್ಡಿ, ಸರಕಾರಿ ಮುಸ್ಲಿಂ ವಸತಿ ಶಾಲೆಯ ಪ್ರಾಂಶುಪಾಲ ಮಂಜುನಾಥ ಭಟ್, ಅಲ್ಪಸಂಖ್ಯಾತ ತಾಲೂಕು ವಿಸ್ತರಣಾಧಿಕಾರಿ ಮಂಜುನಾಥ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲದ  ಮಹಾಬಲೇಶ್ವರ ನಾಯ್ಕ ಸ್ವಾಗತಿಸಿದರು. ಉಪನ್ಯಾಸಕ ಹರೀಶ್‌  ವಂದಿಸಿದರು. ಉಪನ್ಯಾಸಕ ಡಾ. ವಿರೂಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು