2:12 AM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

12/12/2021, 13:21

ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯದ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು. 

ಮತಾಂತರ ನಿಷೇಧ ಕಾಯಿದೆ ಚರ್ಚೆಗೆ ಮುನ್ನ ಸಮಿತಿ ರಚನೆ ಮಾಡಲಾಗಿದೆ. ಆ ಸಮಿತಿಯು ಕಾನೂನು ಇಲಾಖೆಯ ಸಮಿತಿ ಜತೆ ಮತಾಂತರದ ವಿಷಯವಾಗಿ ಸಂಪೂರ್ಣ ಪರಿಶೀಲನೆ ಮಾಡಲಿದೆ. ಸಮಿತಿ ನೀಡುವ ವರದಿ ಸಂಪುಟ ಸಭೆ ಮುಂದೆ ಬರುತ್ತದೆ.

ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ. ನಂತರ ವಿಧಾನಸಭೆಗೆ ಬಂದರೆ ಬೆಳಗಾವಿಯಲ್ಲಿಯೇ ಮತಾಂತರ ಕಾಯಿದೆ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಹ್ಯಾಕ್ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಪ್ರಧಾನಿಗಳು ಟ್ವಿಟರ್ ಹ್ಯಾಕ್ ಕುರಿತು ಮಾತನಾಡಿದ್ದಾರೆ. ಹಾಗಾಗಿ ತಪ್ಪಿತಸ್ಥರನ್ನು ಗುರುತಿಸಲು ಕಾರ್ಯಾಚರಣೆ ಕೂಡ ಮಾಡಲಾಗುತ್ತಿದೆ. ಅದಲ್ಲದೇ ಇಂತಹ ಹ್ಯಾಕ್ ಆಗುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಅವರು ನುಡಿದರು. 

ರಾಜ್ಯದಲ್ಲಿ ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಹೆಚ್ಚಿಸಲಾಗುವುದು, ಈಗಾಗಲೇ ಒಂದು ಜಿನೋಮಿಕ್ ಸ್ವಿಕ್ವೇನ್ಸ್ ಲ್ಯಾಬ್ ನ್ನು ಹೆಚ್ಚಿಗೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು