7:58 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ನಗರವನ್ನೇ ಬೆಚ್ಚಿಬೀಳಿಸುವ ಘಟನೆ: 6ನೇ ತರಗತಿ ಬಾಲಕನಿಂದ 9ನೇ ತರಗತಿಯ ವಿದ್ಯಾರ್ಥಿಯ ಭೀಕರ ಕೊಲೆ

13/05/2025, 23:34

ಹುಬ್ಬಳ್ಳಿ(reporterkarnataka.com):‌ ಗುರುಸಿದ್ದೇಶ್ವರ ನಗರದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ 9ನೇ ತರಗತಿಯ ವಿದ್ಯಾರ್ಥಿಯನ್ನು ಚಾಕು ಇರಿದು ಕೊಲೆ ಮಾಡಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ಮಂಗಳವಾರ ಸಂಜೆ ವೇಳೆ ಮಕ್ಕಳು ಆಟವಾಡುತ್ತಿದ್ದಾಗ ಈ ಇಬ್ಬರ ನಡುವೆ ಸ್ವಲ್ಪ ಮಟ್ಟಿನ ಜಗಳ ನಡೆದಿತ್ತು. ಇದರಿಂದ ಕುಪಿತಗೊಂಡ 6ನೇ ತರಗತಿಯ ವಿದ್ಯಾರ್ಥಿ ಮನೆಗೆ ಹೋಗಿ ಚಾಕು ತೆಗೆದುಕೊಂಡು ಬಂದು 9ನೇ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾನೆ. ಮಗ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದದನ್ನು ಕಂಡು ಬೆಚ್ಚಿಬಿದ್ದ ತಾಯಿ, ಆಕೆಯೇ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 9ನೇ ತರಗತಿ ಬಾಲಕ ಮೃತಪಟ್ಟಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು