8:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಬ್ದುಲ್ ರಹಿಮಾನ್ ಹತ್ಯೆ: ಬಂಟ್ವಾಳ ಸಹಿತ 5 ತಾಲೂಕುಗಳಲ್ಲಿ ಮೇ 30ರ ವರೆಗೆ ನಿಷೇಧಾಜ್ಞೆ ಜಾರಿ

28/05/2025, 22:41

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳದಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ಹತ್ಯೆ ಮಾಡಿದ ಹಿನ್ನಲೆಯಲ್ಲಿ ಮೇ 27 ರ ಸಂಜೆಯಿಂದ ಮೇ 30 ರ ಸಂಜೆ 6 ಗಂಟೆವರೆಗೆ ಬಂಟ್ವಾಳ , ಬೆಳ್ತಂಗಡಿ, ಪುತ್ತೂರು ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಅದೇಶ ಹೊರಡಿಸಲಾಗಿದೆ. ಅಬ್ದುಲ್ ರಹಿಮಾನ್ ಎಂಬವರ ಕೊಲೆಯ ಬಳಿಕ ದ.ಕ.ಜಿಲ್ಲಾ ಪೋಲೀಸ್ ಘಟಕ ವ್ಯಾಪ್ತಿಯಲ್ಲಿ ಪರಿಸ್ಥಿತಿ ಪ್ರಕ್ಷ್ಯುಬ್ದ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ದ.ಕ.ಜಿಲ್ಲಾ ಪೋಲೀಸ್ ಘಟಕ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಅದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಿರುವುದರಿಂದ ದ.ಕ.ಜಿಲ್ಲಾ ಪೋಲೀಸ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಿದೆ.
ನಿಷೇಧಾಜ್ಣೆ ಆದೇಶದಿಂದ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿಷೇಧಿಸಲಾಗಿದೆ. ಮೆರವಣಿಗೆ ಸಭೆಸಮಾರಂಭಕ್ಕೆ ನಿಷೇಧ. ಯಾವುದೇ ಶಸ್ತ್ರ ,ದೊಣ್ಣೆ, ಕತ್ತಿ,ಗದೆ, ಬಂದೂಕು, ಚಾಕು ,ಕೋಲು ಅಥವಾ ಲಾಟಿಗಳನ್ನು,ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು