8:00 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತನ್ನಿ: ಶಾಸಕ ರಾಜೇಶ್ ಶೆಟ್ಟಿ ಉಳಿಪ್ಪಾಡಿಗುತ್ತು

09/04/2023, 10:17

ಬಂಟ್ವಾಳ(reporterkarnataka.com):
ದೇಶದಲ್ಲಿ ಡಬ್ಬಲ್ ಇಂಜಿನ್ ಸರಕಾರ ಆಡಳಿತ ನಡೆಸಿದರೆ ಅಭಿವೃದ್ಧಿಗೆ ಸಹಕಾರವಾಗುತ್ತದೆ. ಹಾಗಾಗಿ ಮತ್ತೊಮ್ಮೆ ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಮದ್ವ ಶಕ್ತಿ ಕೇಂದ್ರದ ರಮೇಶ್ ಪೂಜಾರಿ ಮದ್ವ ಪಲ್ಕೆ ಅವರ ಮನೆಯಲ್ಲಿ ನಡೆದ ಬಿಜೆಪಿ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಜನರ ಪೂರ್ಣ ಬೆಂಬಲದಿಂದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು. ಮುಂಬರುವ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲು ಕ್ಷೇತ್ರದ ಎಲ್ಲಾ ಮತದಾರರ ಸಹಕಾರ ಬೇಕು ಎಂದು ಅವರು ಮನವಿ ಮಾಡಿದರು.

ಕೊರೊನಾ ಸಂಕಷ್ಟದ ಅವಧಿಯ ಬಳಿಕ ರಾಜ್ಯ ಸರಕಾರದ ಅನುದಾನಗಳ ಮೂಲಕ ವಿವಿಧ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಸಾಧ್ಯವಾಗಿದೆ. ‌ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯ ಕಾರ್ಯಗಳನ್ನು ಮಾಡಲು ರಾಜ್ಯ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ನೆನಪಿಸುವ ಕಾರ್ಯ ಮಾಡಬೇಕು ಎಂದು ಅವರು ತಿಳಿಸಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾತನಾಡಿ, ಜನರು ನೀಡಿದ ಅಧಿಕಾರವನ್ನು ದುರುಪಯೋಗ ಪಡಿಸದೆ, ರಾಜಧರ್ಮದ ಆಡಳಿತಕ್ಕೆ ಕಾರಣರಾಗಿದ್ದಾರೆ.
‌ಮುಂದಿನ ಅವಧಿಯಲ್ಲಿಯೂ ರಾಜ ಧರ್ಮದ ಅಡಳಿತದ ಅವಶ್ಯಕತೆ ಇರುವುದರಿಂದ ಮತ್ತೊಮ್ಮೆ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರನ್ನು ಶಾಸಕರಾಗಿ ಆಯ್ಕೆ ಮಾಡುವ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದೆ ಎಂದು ಅವರು ತಿಳಿಸಿದರು.
ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಡಬೇಕಾಗ ಅಗತ್ಯವಾದ ಕೆಲಸಗಳನ್ನು ನಿಷ್ಠೆಯಿಂದ ಮಾಡುವ ಅಗತ್ಯವಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಬಂಟ್ವಾಳ ಕ್ಷೇತ್ರದ ಕಾರ್ಯದರ್ಶಿ ರಮನಾಥ ರಾಯಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಧರ್ ಭವಾನಿ, ಜಿನೇಂದ್ರ ಜೈನ್ ,ಲಕ್ಮೀ, ಶಕ್ತಿ ಕೇಂದ್ರ ದ ಪ್ರಮುಖ್ ಸತೀಶ್ ಶೆಟ್ಟಿ ಮದ್ವ ಕಟ್ಟೆ, ಪ್ರಮುಖರಾದ ಶಿವಪ್ಪ ಗೌಡ ನಿನ್ನಿಕಲ್ಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು