ಇತ್ತೀಚಿನ ಸುದ್ದಿ
ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಸಲ್ಲ: ಶಾಸಕ ವೇದವ್ಯಾಸ ಕಾಮತ್ ಅಭಿಮತ
07/09/2022, 23:03

ಮಂಗಳೂರು(reporterkarnataka.com):ಮಂಗಳೂರು ನಗರವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪಕಳಡ್ಕ ಸತ್ಯನಾರಾಯಣ ಭಜನಾ ಮಂದಿರದ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ. ಅಭಿವೃದ್ಧಿಯ ವಿಚಾರದಲ್ಲಿ ಪಕ್ಷಭೇಧವಿಲ್ಲದೆ ಸಹಕಾರ ನೀಡಿದರೆ ರಾಜ್ಯದ ಮಾದರಿ ನಗರವಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಶೋಭಾ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಬಿ.ರಾಮಚಂದ್ರ ಆಳ್ವ, ರವೀಂದ್ರ ಸೇಮಿತ,, ಭರತ್‌ರಾಜ್ ಶೆಟ್ಟಿ, ಸುದರ್ಶನ್,ಸದಾಶಿವ ದಾಸ್ ಕೆ. ರಮೇಶ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬಜಾಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಅಧ್ಯಕ್ಷ ಜಯ.ಕೆ ಬಜಾಲ್ ಪ್ರಸ್ತಾಪಿಸಿದರು.ಉಪಾಧ್ಯಕ್ಷ ನಾಗೇಶ್ ಶೆಟ್ಟಿ ಬಜಾಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಸಾಲ್ಯಾಯನ್ ವಂದಿಸಿದರು.