9:42 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವ ಭಾರತ: ವಿಜ್ಞಾನಿ ಡಾ. ಆನಂದ್ ರಂಗನಾಥನ್ ಸಂತಸ

03/09/2023, 20:05

ಮಂಗಳೂರು(reporterkarnataka.com): ಭಾರತವು ಹಿಂದೆ ಹಲವಾರು ಅವಕಾಶಗಳನ್ನು ಕೈ ಚೆಲ್ಲಿದೆ, ಆದರೆ ಇಂದು ಅವಕಾಶಗಳನ್ನು ಸದುಪಯೋಗಪಡಿಸಿ ಮುನ್ನಡೆಯುವ ದೇಶವಾಗಿ ಮಾರ್ಪಾಡುಗೊಂಡಿದೆ. ಇಡೀ ವಿಶ್ವಕ್ಕೆ ಬಾಧಿಸಿದ ಕೋವಿಡ್-19 ಅನ್ನು ನಮ್ಮ ದೇಶವು ಸಮರ್ಥವಾಗಿ ಎದುರಿಸಿರುತ್ತದೆ. ಇದು ಭಾರತದ ಸಾಮರ್ಥ್ಯವನ್ನು ತೋರಿಸುತ್ತದೆ. ಇಂದು ನಮ್ಮ ಮುಂದೆ ಬೇರೆ ಬೇರೆ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿವೆ ಮುಂದಿನ 25 ವರ್ಷಗಳು ನಿಜಕ್ಕೂ ಭಾರತದ ಇತಿಹಾಸದಲ್ಲಿ ಅಮೃತ ಕಾಲವಾಗಲಿದೆ ಎಂದು ಪ್ರಸಿದ್ಧ ವಿಜ್ಞಾನಿ, ಲೇಖಕ ಮತ್ತು ಸಂಶೋಧಕ ಡಾ. ಆನಂದ್ ರಂಗನಾಥನ್ ಹೇಳಿದರು.


ಅವರು ರಾಮಕೃಷ್ಣ ಮಿಷನ್ ಮಾರ್ಗದರ್ಶನ ದಲ್ಲಿ ಸ್ವಚ್ಛ ಮಂಗಳೂರು ಫೌಂಡೇಷನ್ ಮತ್ತು ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಂಗಳೂರು ರಾಮಕೃಷ್ಣ ಮಠದ ವಿವೇಕಾನಂದ ಸಭಾಭವನದಲ್ಲಿ ನಡೆದ “ಜಿಜ್ಞಾಸಾ” : ಸನಾತನ ಚಿಂತನ ಗಂಗಾ : ದ್ವೈಮಾಸ ಮೊದಲ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾರತ- 2047 ಅವಕಾಶಗಳ ಆಗರ” ಇದರ ಕುರಿತು ಮಾತನಾಡಿದರು.
ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು ಮಂಗಳೂರು ರಾಮಕೃಷ್ಣ ಮಠ ಮತ್ತು ಮಿಷನ್ ಆಧ್ಯಾತ್ಮಿಕ , ಸಾಂಸ್ಕೃತಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ಇತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದೆ. ಇದರೊಂದಿಗೆ ಸ್ವಚ್ಛ ಮಂಗಳೂರು ಫೌಂಡೇಶನ್ ಇದರ ಮೂಲಕ ಸ್ವಚ್ಛ ಮಂಗಳೂರು ಅಭಿಯಾನ ಆರಂಭದ ಕಾರ್ಯ ನಿಜಕ್ಕೂ ಶ್ಲಾಘನೀಯ ಮುಂದೆಯೂ ಇನ್ನಷ್ಟು ಉತ್ತಮ ಕಾರ್ಯಕ್ರಮಗಳು ಹೀಗೆ ಮುಂದುವರೆಯಲಿ ಮಂಗಳೂರಿನ ಜನತೆಗೆ ಉತ್ತಮ ಸೇವೆ ನೀಡಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಎನ್ ವಿನಯ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿಜ್ಞಾಸಾದ ಸಂಯೋಜಕ ಮತ್ತು ಭಾರತೀಯ ಸೇನೆಯ ಅನುಭವಿ ಸೈನಿಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ ಸ್ವಾಗತಿಸಿ, ಜಿಜ್ಞಾಸಾದ ಸಹ ಸಂಯೋಜಕ ಮತ್ತು ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಜಿಯೋಥೆರಫಿ ಇದರ ಪ್ರಾಂಶುಪಾಲ ಪ್ರೊ. ಧನೇಶ್ ಕುಮಾರ್ ವಂದಿಸಿ, ಐಶ್ವರ್ಯ ನಾಯರ್ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು