4:19 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಬಿವಿಪಿ: ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬಾವುಟಗುಡ್ಡದ ವರೆಗೆ ಬೃಹತ್ ತಿರಂಗ ಯಾತ್ರೆ

13/08/2022, 21:26

ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು.

ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ್ನು ಹಾರಿಸಿ ಸ್ವತಂತ್ರವನ್ನ ಘೋಷಿಸಿಕೊಂಡ ಸ್ಥಳ ಬಾವುಟಗುಡ್ಡ ಆ ಸ್ಥಳವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಮಣೆಕಂಠ ಕಳಸಾ ಮಾತನಾಡಿದರು. 


ಮಂಜೆಶ್ವರ ಗೋವಿಂದ ಪೈ ವೃತ್ತದಿಂದ ಬಾವುಟ ಗುಡ್ಡದವರೆಗೆ ನೂರಾರು ವಿದ್ಯಾರ್ಥಿಗಳು ತಿರಂಗವನ್ನು ಹಿಡಿದು, ಭಾರತ್ ಮಾತಾ ಕಿ ಜೈ ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಶಾಖೆ ವತಿಯಿಂದ 75ನೇ ಸ್ವತಂತ್ರ ದಿನದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವೆಲ್ಲರೂ ಸ್ವತಂತ್ರದ ಹೋರಾಟಕ್ಕೆ ಸಾಕ್ಷಿಯಾದ ಸ್ಥಳಗಳ ವ್ಯಕ್ತಿಗಳ ಇತಿಹಾಸವನ್ನು ಇಂದಿನ ಯುವಜನತೆ ತಿಳಿದುಕೊಳ್ಳಬೇಕೆಂಬುವುದು ವಿದ್ಯಾರ್ಥಿ ಪರಿಷತ್ ಆಶಯ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸ್ವತಂತ್ರ ದಿನದ ಪ್ರಯುಕ್ತ ವಿದ್ಯಾರ್ಥಿ ಪರಿಷತ್ ನ ನೇತೃತ್ವದಲ್ಲಿ ತಿರಂಗ ಯಾತ್ರೆಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಮಂಗಳೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ವಿದ್ಯಾರ್ಥಿ ಸಮುದಾಯ ತಮ್ಮ ಶಿಕ್ಷಣದ ಜೊತೆಗೆ ಸ್ವತಂತ್ರ ಹೋರಾಟಕ್ಕಾಗಿ ಹೋರಾಡಿದ ವ್ಯಕ್ತಿಗಳ ಚರಿತ್ರೆಗಳನ್ನು ಅಧ್ಯಯನ ಮಾಡುವ ಪ್ರವೃತ್ತಿಯನ್ನು ಹೊಂದಬೇಕು ಎಂದರು. ತಮ್ಮ ಶಿಕ್ಷಣದ ನಂತರ ಹೋಗುವ ಎಲ್ಲ ಕ್ಷೇತ್ರಗಳಲ್ಲಿ ನಾನು ಮಾಡುವ ಕೆಲಸ ದೇಶಕ್ಕೆ ಒಳಿತನ್ನ ಮಾಡುವ ಹಾಗೆ ನಮ್ಮ ಕಾರ್ಯ ಇರಬೇಕು ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶ್ರೇಯಸ್ ಶೆಟ್ಟಿ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಶ್ರೀಲಕ್ಷ್ಮಿ ಮಠದಮೂಲೆ, ನಗರ ಕಾರ್ಯದರ್ಶಿ ಆದಿತ್ಯ ಶೆಟ್ಟಿ, ಪ್ರಮುಖರಾದ ಸ್ಕಂದ ಕಿರಣ, ಶ್ರೀಪಾದ ತಂತ್ರಿ, ಸುಶಾಂತ, ಮೇಘನಾ, ಪ್ರತಿಕ್ಷಾ, ಹರ್ಷಿತಾ, ಸಂತೋಷ ರೈ, ರಂಜಿತ, ರಾಹುಲ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು