1:18 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಭ್ಯರ್ಥಿ ಯಾರೇ ಆಗಲಿ, ಕರಾವಳಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಮುಖ್ಯ: ಪಕ್ಷದ ಮುಖಂಡರಿಗೆ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

24/01/2024, 22:57

ಮಂಗಳೂರು(reporterkarnataka.com): ಅಭ್ಯರ್ಥಿ ಯಾರೇ ಇರಲಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾಕೀತು ಮಾಡಿದರು.
ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.


ರಾಜಕೀಯದಲ್ಲಿ ಅಸಾಧ್ಯ ಎನ್ನುವುದು ಯಾವುದೂ ಇಲ್ಲ. ಎಲ್ಲವೂ ಸಾಧ್ಯ. ಕರಾವಳಿಯಲ್ಲಿ ಕಾಂಗ್ರೆಸ್ ಗೆಲ್ಲೊಲ್ಲ ಎನ್ನುವ ಭಾವನೆ ಬೇಡ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಕ್ಷೇತ್ರಗಳನ್ನು ನಾವು ಗೆದ್ದಿಲ್ಲವೇ? ಕೊಡಗಿನಲ್ಲಿ ಗೆದ್ದಿಲ್ಲವೇ? ರಾಮನಗರದಲ್ಲಿ ನಾವು ಗೆದ್ದಿಲ್ಲವೇ? ಕರಾವಳಿಯಲ್ಲಿ ಕೂಡ ಮಂಗಳೂರು ಹಾಗೂ ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವನ್ನು ನಾವು ಗೆಲ್ಲಲೇ ಬೇಕು. ಅಭ್ಯರ್ಥಿ ಯಾರು ಎನ್ನುವುದು ನಮಗೆ ಮುಖ್ಯವಲ್ಲ, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದು ನಮಗೆ ಮುಖ್ಯ ಎಂದು ಅವರು ನುಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಎಐಸಿಸಿ ಕಾರ್ಯದರ್ಶಿ ರೋಝಿ ಜಾನ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ
ಪದ್ಮರಾಜ್ ಆರ್. ಮಿಥುನ್ ರೈ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಕೆ. ಹರೀಶ್ ಕುಮಾರ್, ಮುಖಂಡರಾದ ನಿಕೇತ್ ರಾಜ್ ಮೌರ್ಯ ಬಿ., ಕಣಚೂರು ಮೋನು, ಬಿ ಇಬ್ರಾಹಿಂ, ಶಕುಂತಲಾ ಶೆಟ್ಟಿ, ಅಶೋಕ್ ಕೊಡವೂರ್, ಇನಾಯತ್ ಅಲಿ, ಐವನ್ ಡಿ ಸೋಜ, ಮಮತಾ ಗಟ್ಟಿ, ಗಫೂರ್ ಉಡುಪಿ,‌ ಶಶಿಧರ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು