7:57 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಉಡುಪಿ ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಬಂಗಾರ ಪತ್ತೆ

17/06/2022, 14:55

ಉಡುಪಿ(reporterkarnataka.com): ಉಡುಪಿ ಸಣ್ಣ ನೀರಾವರಿ ಇಲಾಖೆಯ
ಸಹಾಯಕ ಇಂಜಿನಿಯರ್‌ ಹರೀಶ್‌ ಮನೆಯಲ್ಲಿ ಕಂತೆ ಕಂತೆ ನೋಟು, ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. 

ಉಡುಪಿಯ ಕೊರಂಗ್ರಪಾಡಿಯ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, 5 ಲಕ್ಷ ರೂಪಾಯಿ ನಗದು ಚಿನ್ನದ ತಟ್ಟೆ, ಅಪಾರ ಚಿನ್ನದ ಆಭರಣಗಳನ್ನು ಪತ್ತೆ ಹಚ್ಚಿದ್ದಾರೆ.

15ಕ್ಕೂ ಹೆಚ್ಚು ಚಿನ್ನದ ಬಳೆಗಳು, 30ಕ್ಕೂ ಹೆಚ್ಚು ಚಿನ್ನದ ಸರ, ನೆಕ್ಲೆಸ್‌ ಬ್ರಾಸ್ಲೈಟ್‌, ಚಿನ್ನದ ಒಡವೆ, ಉಂಗುರ,ದೇವರ ಮೂರ್ತಿಗಳು ಪತ್ತೆಯಾಗಿದೆ. ಆಸ್ತಿ ಪತ್ರ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ಸ್‌ ಪೆಕ್ಟರ್‌ ಗಳಾದ ಸತೀಶ್.ಜಿ.ಜೆ, ರಫಿಕ್ ಎಂ, ಸಿಬಂದಿಗಳಾದ ಯತಿನ್ ಕುಮಾರ್, ಪ್ರಸನ್ನ ದೇವಾಡಿಗ, ರವೀಂದ್ರ ಗಾಣಿಗ, ಅದ್ಬುಲ್ ಜಲಾಲ್, ಅಬ್ದುಲ್ ಲತೀಫ್, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು,ರಮೇಶ್ ಭಂಡಾರಿ, ಹಾಗೂ ಪ್ರತಿಮಾ ದಾಳಿಯಲ್ಲಿ ಭಾಗವಹಿಸದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು