11:45 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಎಸಿಬಿ ದಾಳಿ: ಮೆಸ್ಕಾಂ ಎಇಇ ದಯಾಳ್ ಸುಂದರ್ ಅವರ ಮಂಗಳೂರು‌ ಮನೆಯಲ್ಲಿ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

16/03/2022, 21:28

ಮಂಗಳೂರು(reporterkarnataka.com) : ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಮಂಗಳೂರಿನ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್‌ ಅವರ ಮನೆ ಮತ್ತು ಕಚೇರಿಗೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪ ಹೊಂದಿರುವ ದಯಾಳ್ ಸುಂದರ್ ಅವರ ಮನೆಯಲ್ಲಿ ದೊರೆತ ಅಕ್ರಮ ಆಸ್ತಿ ವಿವರ ಇಲ್ಲಿದೆ.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿರುವ ದಯಾಳ್ ಸುಂದರ್ ಅವರು ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಯಾಳ್ ಅವರು

ಕದ್ರಿ ಕಂಬಳ ಬಳಿ ಸ್ವಂತ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಆದರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎಸಿಬಿ ದಾಳಿ ವೇಳೆ

ಬೆಂದೂರ್‌ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದು ಪತ್ತೆಯಾಗಿದೆ. ನಗದು ಮೊತ್ತ ಇನ್ನೂ ದೃಢಪಟ್ಟಿಲ್ಲ.

ಮಂಗಳೂರು ಮತ್ತು ಮೈಸೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಮೈಸೂರಿನಲ್ಲಿ 2 ಸೈಟ್, ಹುಣಸೂರಿನಲ್ಲಿ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿದೆ. ಕೋಟ್ಯಂತರ ರೂ. ಮೌಲ್ಯದ ಜಾಗದ ದಾಖಲೆಗಳನ್ನು ಎಸಿಬಿ ತಂಡ ವಶಕ್ಕೆ ಪಡೆದುಕೊಂಡಿದೆ.

ಬಾಡಿಗೆ ಮನೆ,  ಅಪಾರ್ಟ್‌ಮೆಂಟ್ ಮತ್ತು ಕುಲಶೇಖರ ಕಚೇರಿ ಮೇಲೆ ಎಸಿಬಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಪ್ರಕಾಶ್, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಹಾಗೂ ಕಾರವಾರ ಎಸಿಬಿ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು