8:15 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಎಸಿಬಿ ರದ್ದತಿ ವಿರುದ್ಧ ಅರ್ಜಿ: ವಿಚಾರಣೆಗೆ  ಸುಪ್ರೀಂ ಕೋರ್ಟ್ ನಕಾರ

06/09/2022, 15:18

ಹೊಸದಿಲ್ಲಿ(reporterkarnataka.com): ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಕನಕರಾಜು ಎಂಬುವರು ಸುಪ್ರೀಂ ಕೋರ್ಟ್‌ಗೆ ಆಗಸ್ಟ್‌ 23ರಂದು ಮೇಲ್ಮನವಿ ಸಲ್ಲಿಸಿದ್ದರು.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಕನಕರಾಜು ಎಂಬುವರು ಸುಪ್ರೀಂ ಕೋರ್ಟ್‌ಗೆ ಆಗಸ್ಟ್‌ 23ರಂದು ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ಪೀಠವು ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತ್ತು.

ಸೋಮವಾರ ಈ ಪ್ರಕರಣವು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠದ ಎದುರು ಬಂತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್‌ ರೊಹಟಗಿ ಅವರನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, ‘ಕನಕರಾಜು ಅವರ ಮನವಿಯನ್ನು ನ್ಯಾಯಾಲಯ ಏಕೆ ಪರಿಗಣಿಸಬೇಕು’ ಎಂದು ಕೇಳಿದರು.

ರೊಹಟಗಿ ವಾದ ಮಂಡಿಸಿ, ‘ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಬೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಕನಕರಾಜು ಅವರು ಎಸಿಬಿಯಲ್ಲಿ ದೂರು ಸಲ್ಲಿಸಿದ್ದರು. ಅವರು ದೂರುದಾರರಾಗಿದ್ದಾರೆ. ಜತೆಗೆ, ಹೈಕೋರ್ಟ್‌ ಆದೇಶವನ್ನು ಕರ್ನಾಟಕ ಸರ್ಕಾರ ಸಹ ಪ್ರಶ್ನಿಸಿದೆ ಎಂದು ಕನಕರಾಜು ಹೇಳಿದ್ದಾರೆ’ ಎಂದರು.

ಆಗ ನ್ಯಾಯಮೂರ್ತಿಗಳು, ‘ಹಾಗಿದ್ದರೆ ರಾಜ್ಯ ಸರ್ಕಾರದ ಅರ್ಜಿಯೊಂದಿಗೆ ಪ್ರಕರಣದ ವಿಚಾರಣೆಯನ್ನು ಮುಂದೂಡುತ್ತೇವೆ’ ಎಂದು ತಿಳಿಸಿದರು.

ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಲು 2016ರಲ್ಲಿ ರಚಿಸಲಾಗಿದ್ದ ಎಸಿಬಿಯನ್ನು 2022ರ ಆಗಸ್ಟ್‌ 11ರಂದು ರದ್ದುಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು