6:49 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

20 ಲಕ್ಷ ರೂ. ಲಂಚ ಸ್ವೀಕಾರ: ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ ಬಲೆಗೆ

24/04/2025, 22:24

ಬೆಂಗಳೂರು(reporterkarnataka.com): ಸುಮಾರು 20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್.ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.2025ನೇ ಏಪ್ರಿಲ್ 24ರಂದು ಸಂಜೆ ಸುಮಾರು 6.50 ಗಂಟೆ ವೇಳೆಗೆ ನಾಗರಭಾವಿ ಹತ್ತಿರವಿರುವ ನಮ್ಮೂರ ತಿಂಡಿ ಹೊಟೇಲ್ ಹತ್ತಿರ ನಿಜಾನಂದಮೂರ್ತಿ ಎಂ.ಆರ್. ಅವರು ಮನೋಜ್ ಎಂ. ಎಂಬುವವರ ಕಡೆಯಿಂದ 20 ಲಕ್ಷ ರೂ. ಲಂಚದ ಹಣವನ್ನು ಪಡೆದುಕೊಳ್ಳುತ್ತಿರುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳು ಸರಕು ಸಾಗಾಣಿಕೆ ಕಂಪನಿಗಳ ಮಾಲೀಕರ ಕಡೆಯಿಂದ ಪ್ರತಿ ತಿಂಗಳು ಲಂಚದ ಹಣವನ್ನು ಪಡೆದುಕೊಂಡು, ದೆಹಲಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆದ್ದಾರಿ ಮಾರ್ಗವಾಗಿ ಪಾನ್ ಮಸಾಲವನ್ನು ಸಾಗಾಣಿಕೆ ಮಾಡುತ್ತಿರುವ ಪಾನ್ ಮಸಾಲ ಸರಕು ಸಾಗಾಣಿಕೆದಾರರಿಗೆ ಅಕ್ರಮವಾಗಿ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡಲು ಅನುವು ಮಾಡಿಕೊಡುತ್ತಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕರಾದ ಪವನ್ ನೆಟ್ಟೂರ್ ಅವರ ಮಾರ್ಗದರ್ಶನದಲ್ಲಿ ವೆಂಕಟೇಶ್ ಟಿ.ಸಿ. ಡಿವೈಎಸ್ಪಿ, ಗಿರೀಶ ಪಾಂಡು ರೋಡಕರ್, ಡಿವೈಎಸ್ಪಿ ಮತ್ತು ಹಾಲಪ್ಪ ವೈ ಬಾಲದಂಡಿ, ಪೊಲೀಸ್ ಇನ್ಸ್ಪೆಕ್ಟರ್, ಚಂದ್ರಕಾಂತ ಎಲ್.ಟಿ. ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಾಚರಣೆ ನಡೆಸಿ ಹಣದ ಮಾಲು ಸಮೇತ ಅರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಇಂತಹ ಘಟನೆಗಳಿಂದಾಗಿ ಕರ್ನಾಟಕ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಉಂಟು ಮಾಡುತ್ತಿದ್ದರು. ಪದೀಯ ಕಾರ್ಯಕ್ಕೆ ಸಂಬಂಧಿಸಿದಂತೆ ಪಾಲಿಸಬೇಕಾದ ಕಾನೂನನ್ನು ಪಾಲಿಸದೆ ಖಾಸಗಿ ಕಂಪನಿ ಹಾಗೂ ಖಾಸಗಿ ಜನರಿಗೆ ಕಾನೂನು ಬಾಹಿರ ಲಾಭ ಮಾಡಿಕೊಡುವ ಸಲುವಾಗಿ ಲಂಚದ ಹಣವನ್ನು ಪಡೆದುಕೊಂಡು ಸರ್ಕಾರಕ್ಕೆ ವಂಚನೆಯನ್ನು ಮಾಡಿ ಸಾಗಾಣಿಕೆದಾರರ ವೈಯಕ್ತಿಕ ಹಿತಾಸಕ್ತಿಯನ್ನು ಕಾಪಾಡಲು ಅನುಕೂಲವನ್ನು ಮಾಡಿಕೊಟ್ಟು ಅಪರಾಧಿಕ ನಂಬಿಕೆ ದ್ರೋಹವನ್ನು ಎಸಗಿ ಸರ್ಕಾರಕ್ಕೆ ಮೋಸಮಾಡಿ ಅಕ್ರಮ ನಷ್ಟವನ್ನುಂಟು ಮಾಡುತ್ತಿರುವ ಬಗ್ಗೆ ಇದ್ದಂತಹ ಮಾಹಿತಿಯನ್ನು ಖಚಿತ ಪಡಿಸಿಕೊಂಡು ಮೊ. ಸಂ 06/2025 ಕಲಂ 7(a),7(b),8,9,10 ಪಿ.ಸಿ ಆಕ್ಟ್ 1988 (ತಿದ್ದುಪಡಿ 2018) ಜೊತೆಗೆ 318(2)(3), 336(2), ಭಾರತೀಯ ನ್ಯಾಯ ಸಂಹಿತೆ-2023 ರೀತ್ಯ ದಿನಾಂಕ: 23-04-2025 ರಂದು ಪ್ರಕರಣ ದಾಖಲು ಮಾಡಲಾಗಿರುತ್ತೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು