3:31 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

22,600 ರೂ. ಲಂಚ ಸ್ವೀಕಾರ: ಎಸ್‌ಡಿಎ ಸಂಪತ್‌ ಮಂಗಳೂರು ಲೋಕಾಯುಕ್ತ ಬಲೆಗೆ

03/03/2026, 19:26

ಮಂಗಳೂರು(reporterkarnataka.com):ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ವಿದ್ಯುತ್ ಉಪವಿಭಾಗ ಎಸ್‌ಡಿಎ ಆಗಿರುವ ಸಂಪತ್ ಅವರು 22,600 ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರಾಜ್ಯ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆ ಗುತ್ತಿಗೆದಾರರು 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಕಾಮಗಾರಿಯ ಬಿಲ್ ಪಾವತಿಗೆ 4 ಶೇಕಡಾ ಪ್ರಮಾಣದಲ್ಲಿ ಒಟ್ಟು ₹22,600/- ಲಂಚ ನೀಡುವಂತೆ ಸಂಪತ್ ಅವರು ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಗುತ್ತಿಗೆದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧಾರವಾಗಿ ಸಂಪತ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಇದಾದ ಬಳಿಕ 02.03.2026 ರಂದು ಸಂಪತ್ ಅವರು ಫಿರ್ಯಾದುದಾರರಿಂದ ₹22,600/- (ಇಪ್ಪತ್ತೆರಡು ಸಾವಿರ ಆರು ನೂರು ರೂ.) ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಕಾರ್ಯಾಚರಣೆ ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಾದ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಸುರೇಶ್ ಕುಮಾರ್ ಪಿ. ಹಾಗೂ ಡಾ. ಗಾನ ಪಿ. ಕುಮಾರ್, ಪಿ.ಐ. ಭಾರತಿ ಜಿ ಅವರ ಉಸ್ತುವಾರಿಯಲ್ಲಿ ಪೊಲೀಸ್ ನಿರೀಕ್ಷಕರಾದ ಚಂದ್ರಶೇಖರ್ ಕೆ.ಎನ್. ಮತ್ತು ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ, ಗಂಗಣ್ಣ, ಮಹಾದೇವ, ಪವಿತ್ರ, ಲಕ್ಷ್ಮೀ, ರವಿ ಪವಾರ್ ಹಾಗೂ ನವೀನ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು