10:14 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಅಪರಿಚಿತ ವಾಹನ ಡಿಕ್ಕಿ: ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು; ಹಿಟ್ ಅಂಡ್ ರನ್ ಪ್ರಕರಣ ದಾಖಲು

21/10/2024, 21:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಖಾಸಗಿ ಸಂಸ್ಥೆಯ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.
ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನಿಲ್(24) ವರ್ಷದ ಮೃತ ದುರ್ದೈವಿ.


ನಿನ್ನೆ ಸಂಜೆ ಏಳು ಗಂಟೆಯ ಸಮಯದಲ್ಲಿ ತನ್ನ ಕೆಲಸ ಮುಗಿಸಿ ಹುಸ್ಕೂರು ರಸ್ತೆ ಮೂಲಕ ಹಗಿನವಾಳು ಗ್ರಾಮದ ಬಳಿ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸುನಿಲ್ ಸುಮಾರು 20 ಅಡಿ ದೂರ ಹಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪಿಎಸ್ ಐ ಸಿದ್ದರಾಜು ಸಿಬ್ಬಂದಿಗಳಾದ ಮಹೇಂದ್ರ ವಸಂತ್ ಕುಮಾರ್ ಇತರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿದ್ದಾರೆ.
ಅಪರಿಚಿತ ವಾಹನ ಪತ್ತೆಗೆ ಸಂಚಾರಿ ಪೊಲೀಸರು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು