ಇತ್ತೀಚಿನ ಸುದ್ದಿ
Accident | ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ
18/02/2025, 17:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnata@gmail.com
ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ
ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ಬೈಕ್ ಸವಾರ ಸುಜೀತ್ ಎಂಬುವನು ಮೆಗಲ್ ಪೇಟೆಯವನಾಗಿದ್ದು ತಲೆ ಹಾಗೂ ಕೈ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.