ಇತ್ತೀಚಿನ ಸುದ್ದಿ
Accident | ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ: 3 ಮಂದಿ ಪವಾಡಸದೃಶ್ಯ ಅಪಾಯದಿಂದ ಪಾರು
27/03/2025, 00:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪವಾಡಸದೃಶ್ಯ ಪಾರಾಗಿದ್ದಾರೆ.
ಅಂತ್ಯ ಸಂಸ್ಕಾರ ಮುಗಿಸಿ ಬಾಳೆಹೊನ್ನೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿತ್ತು.
ಅಪಘಾತದದ ರಭಸಕ್ಕೆ ಕಾರಿನ ಟಯರ್ ತುಂಡು-ತುಂಡಾಗಿ ಬಿದ್ದಿವೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಟಿಪ್ಪರ್ ಲಾರಿಯ ಆಕ್ಸೆಲ್ ತುಂಡಾಗಿ ಕಂದಕಕ್ಕೆ ಲಾರಿ ಇಳಿದಿದೆ. ಟಿಪ್ಪರ್ ಚಿಕ್ಕಮಗಳೂರಿನಿಂದ ಬಾಳೆಹೊನ್ನೂರಿಗೆ ಹೋಗುತ್ತಿತ್ತು.ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.