8:00 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ ಅಮಾನತು

17/06/2026, 19:46

ಬೆಂಗಳೂರು(reporterkarnataka.com):ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜನ್ ತಂಗದುರೈ ಅವರನ್ನು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ. ಈ ಪ್ರಕರಣವು ವಿಶ್ವವಿದ್ಯಾಲಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ವಿದ್ಯಾರ್ಥಿ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಪ್ರಾಧ್ಯಾಪಕರು ತಮ್ಮ ಮಾರ್ಗದರ್ಶನದಲ್ಲಿ ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ವೈಯಕ್ತಿಕ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದ್ದು ಬಳಿಕ ಆ ವಿದ್ಯಾರ್ಥಿನಿ ಸಂಶೋಧನೆಯನ್ನು ಮಧ್ಯದಲ್ಲೇ ನಿಲ್ಲಿಸಿ ವಿಶ್ವವಿದ್ಯಾಲಯ ತೊರೆದಿದ್ದಾಳೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಮತ್ತೊಬ್ಬ ಸಂಶೋಧನಾ ವಿದ್ಯಾರ್ಥಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ದೂರು ನೀಡಿದ್ದಾನೆ. ತನ್ನ ಸಂಶೋಧನಾ ಕಾರ್ಯ ಪೂರ್ಣಗೊಳಿಸಲು ಸಹಕರಿಸುವ ಬದಲಾಗಿ, ಹಿಂದಿನ ವಿದ್ಯಾರ್ಥಿನಿಯನ್ನು ಮತ್ತೆ ಸಂಪರ್ಕಿಸಲು ಪ್ರಾಧ್ಯಾಪಕರು ಒತ್ತಡ ಹೇರಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ಕೆಲವು ಆಡಿಯೋ ದಾಖಲೆಗಳು ಹಾಗೂ ಇತರೆ ಸಾಕ್ಷ್ಯಗಳನ್ನೂ ವಿದ್ಯಾರ್ಥಿ ಸಂಘಟನೆಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಆರೋಪಗಳು ಬಹಿರಂಗವಾದ ನಂತರ ವಿದ್ಯಾರ್ಥಿ ಸಂಘಟನೆಗಳು ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ವಿಶ್ವವಿದ್ಯಾಲಯ ಆಡಳಿತವು ಪ್ರಾಧ್ಯಾಪಕ ದೇವರಾಜನ್ ತಂಗದುರೈ ಅವರನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು