8:02 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ…

ಇತ್ತೀಚಿನ ಸುದ್ದಿ

ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಅಪಹರಣ, ವಂಚನೆ, ಸುಲಿಗೆಯಲ್ಲಿ ಭಾಗಿಯಾದ ಆರೋಪಿಯ ಬಂಧನ

25/11/2025, 19:47

ಮಂಗಳೂರು(reporterkarnataka.com): ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡ ಬಳಿಕ ಅಪಹರಣ, ವಂಚನೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಸಮೀಪದ ನಿವಾಸಿ ಟಿ.ದಿನೇಶ್ ಶೆಟ್ಟಿ ಅಲಿಯಾಸ್ ದಿನ್ನು ಬಂಧಿತ ಆರೋಪಿ.
ಈತ ಮಂಗಳೂರು ದಕ್ಷಿಣ ಠಾಣಾ ಅಕ್ರ ಸಂಖ್ಯೆ 144/2009 ರ ಕೊಲೆ ಪ್ರಕರಣದಲ್ಲಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ರವರಿಂದ ಸುಪಾರಿ ಪಡೆದು ನ್ಯಾಯವಾದಿ ಖಾಸೀಂ ನೌಷಾದ್ ನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿ ನಂತರ ಹೈಕೋರ್ಟ್ ಗೆ ಅಫೀಲು ಸಲ್ಲಿಸಿ ಡಿಸೆಂಬರ್ 2019 ರಲ್ಲಿ ಬಿಡುಗಡೆಗೊಂಡಿರುತ್ತಾನೆ. ನಂತರದ ದಿನಗಳಲ್ಲಿ ಕಾವೂರು ಠಾಣೆಯ ಅಕ್ರ ಸಂಖ್ಯೆ 01/2019 ರ ಅಪಹರಣ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆ ಅಕ್ರ ಸಂಖ್ಯೆ 88/2022 ರ ವಂಚನೆ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆ ಅಕ್ರ ಸಂಖ್ಯೆ 06/2023ರ ಸುಲಿಗೆ ಪ್ರಕರಣಗಳಲ್ಲಿಯೂ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂದೂವರೆ ವರ್ಷದಿಂದ ತಲೆ ಮೆರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಇಂದು ಎಸಿಪಿ ಉತ್ತರ ಉಪವಿಭಾಗ ಹಾಗೂ ಅವರ ತಂಡ ದಸ್ತಗಿರಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು