1:14 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ

18/06/2025, 10:43

•ನಾಲ್ಕು ಮಹಾನಗರ ಪಾಲಿಕೆಗಳಿಗೆ ಒಂದು ದಿನದ ಗಡುವು ನೀಡಿದ ಸಚಿವರು

ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚನೆ

ಬೆಂಗಳೂರು(reporterkarnataka.com): ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ್ಯಸ್ಥರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಯೋಜನೆ ಕುರಿತು ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಹೊರತುಪಡಿಸಿ ಎಲ್ಲಾ ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಸರ್ಕಾರ ಸೂಕ್ತ ಅನುದಾನವನ್ನು ಬಿಡುಗಡೆ ಮಾಡಿದ್ದರೂ ಅದಕ್ಕೆ ಪೂರಕವಾಗಿ ಕಾರ್ಯಯೋಜನೆ ಸಿದ್ಧಪಡಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ, ರಸ್ತೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಎರಡನೇ ಹಂತದಲ್ಲಿ ಎಲ್ಲಾ 11 ಮಹಾನಗರ ಪಾಲಿಕೆಗಳಿಗೆ ಒಟ್ಟು 1730 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ಮೈಸೂರು, ವಿಜಯಪುರ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಮಂಗಳೂರು ಮತ್ತು ರಾಯಚೂರು ಮಹಾ ನಗರಪಾಲಿಕೆಗಳು ತಮಗೆ ನಿಗದಿಪಡಿಸಲಾದ ಅನುದಾನಕ್ಕೆ ಪೂರಕವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಯೋಜನೆಗಳನ್ನು ಸಿದ್ಧಪಡಿಸಿವೆ. ಆದರೆ, ಕಲಬುರಗಿ, ತುಮಕೂರು, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳು ಇದುವರೆಗೂ ಕಾರ್ಯಯೋಜನೆ ವರದಿಯನ್ನು ಪೂರ್ಣಗೊಳಿಸಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಒಂದು ದಿನದ ಗಡುವು
ಬುಧವಾರ ಸಂಜೆಯೊಳಗೆ ಕಾರ್ಯಯೋಜನೆಯನ್ನು ಸಿದ್ಧಪಡಿಸಬೇಕು. ಈ ಗಡುವಿನೊಳಗೆ ವರದಿಯನ್ನು ಸಿದ್ಧಪಡಿಸದಿದ್ದರೆ ಅಂತಹ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯಾವ್ಯಾವ ಪಾಲಿಕೆಗಳಿಗೆ ಎಷ್ಟೆಷ್ಟು ಅನುದಾನ?
ಮೈಸೂರು ಮಹಾ ನಗರ ಪಾಲಿಕೆಗೆ 250 ಕೋಟಿ ರೂಪಾಯಿಗಳ ಅನುದಾನದ ಪೈಕಿ ಈ ಹಣದಲ್ಲಿ 6 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ವಿಜಯಪುರದಲ್ಲಿ 150 ಕೋಟಿ ರೂಪಾಯಿಗಳು, ಬಳ್ಳಾರಿಗೆ 127.5 ಕೋಟಿ ರೂಪಾಯಿ, ದಾವಣಗೆರೆಗೆ 127.5 ಕೋಟಿ ರೂಪಾಯಿ, ತುಮಕೂರಿಗೆ 175 ಕೋಟಿ ರೂಪಾಯಿ, ಶಿವಮೊಗ್ಗಕ್ಕೆ 127.5 ಕೋಟಿ, ಮಂಗಳೂರಿನಲ್ಲಿ 165 ಕೋಟಿ ರೂಪಾಯಿ, ಕಲಬುರಗಿಗೆ 127.5 ಕೋಟಿ ರೂಪಾಯಿ, ಬೆಳಗಾವಿಗೆ 127.5 ಕೋಟಿ ರೂಪಾಯಿ, ಹುಬ್ಬಳ್ಳಿ-ಧಾರವಾಡಕ್ಕೆ 152.50 ಕೋಟಿ ರೂಪಾಯಿಗಳು ಹಾಗೂ ರಾಯಚೂರು ಮಹಾನಗರ ಪಾಲಿಕೆಗೆ 200 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು