6:42 PM Tuesday9 - December 2025
ಬ್ರೇಕಿಂಗ್ ನ್ಯೂಸ್
ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ…

ಇತ್ತೀಚಿನ ಸುದ್ದಿ

ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

09/12/2025, 18:33

ಬೆಳಗಾವಿ(reporterkarnataka.com): ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳನ್ನು ಜಾರಿಗೊಳಿಸುವಾಗ ಇರುವ ಅಡೆತಡೆಗಳನ್ನು ನಿವಾರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಸುವರ್ಣ ವಿಧಾನಸೌಧದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಸಮಸ್ಯೆಗಳನ್ನು ಸಹಾನುಭೂತಿಯಿಂದ ಅಲಿಸಿದರು.


ಸಿಐಟಿಯು ಅಧ್ಯಕ್ಷರಾದ ವರಲಕ್ಷ್ಮೀ ಅವರು ಮಕ್ಕಳ ರಕ್ಷಣೆ ಹಾಗೂ ಇಲಾಖೆ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಇರುವ ಕೆಲವು ನೂನ್ಯತೆಗಳ ಕುರಿತು ಸಭೆಯಲ್ಲಿ ಸಚಿವರ ಗಮನ ಸೆಳೆದರು.
ಮಕ್ಕಳ ರಕ್ಷಣೆ ಸೇರಿದಂತೆ ಇಲಾಖೆಯ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಇರುವ ತೊಡಕುಗಳನ್ನು ನಿವಾರಿಸಲು ಸಭೆಯಲ್ಲಿ ಹಾಜರಿದ್ದ‌‌ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಹಣಕಾಸು ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲು ಹಣಕಾಸು ಇಲಾಖೆಯ ಅಧಿಕಾರಿಗಳ ‌ಜೊತೆ ಶೀಘ್ರವೇ ಪ್ರತ್ಯೇಕ ಸಭೆ ಆಯೋಜಿಸುವುದಾಗಿ ಸಚಿವರು ‌ಭರವಸೆ ನೀಡಿದರು.
ಈ ವೇಳೆ ಬಾಲ ವಿಕಾಸ ಅಕಾಡೆಮಿ‌ ಅಧ್ಯಕ್ಷರಾದ ಸಂಗಮೇಶ್ ಬಬಲೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಕ್ಕಳ‌ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಸ್ನೇಹಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್, ಸಿಐಟಿಯು ಅಧ್ಯಕ್ಷರಾದ ವರಲಕ್ಷ್ಮೀ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು