5:02 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು ಬಂಗಾರಪ್ಪ

11/12/2025, 20:01

ಬೆಳಗಾವಿ ಸುವರ್ಣ ವಿಧಾನಸೌಧ(reporterkarnataka.com): ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ 5000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು