5:17 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ ಪರಿಷತ್ತಿನಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆ

08/12/2025, 23:45

ಬೆಂಗಳೂರು(reporterkarnataka.com): ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸೋಮವಾರ ಬಿಜೆಪಿಯ ಡಿ.ಎಸ್.ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳನ್ನು 30 ವರ್ಷಗಳ ನಂತರ ಗುತ್ತಿಗೆ ಅವಧಿಯನ್ನು ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು.
ಆದರೆ, ಎಸ್ಆರ್ ದರವನ್ನು ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಸಿಎ ನಿವೇಶನ ಪಡೆದು ಮೂರು ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನು ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನು ಸಡಿಲಿಸಿ ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.
ಆದರೆ, ಯಾವುದೇ ಕಾರಣಕ್ಕೂ ನಿವೇಶನಕ್ಕೆ ಶುದ್ಧ ಕ್ರಯಪತ್ರ ನೀಡಲು ಸಾಧ್ಯವಿಲ್ಲ ಮತ್ತು ಎಸ್ ಸಿ ಮತ್ತು ಎಸ್ ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿಯನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು