3:22 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

13/12/2025, 15:01

ಬೆಳಗಾವಿ, ಸುವರ್ಣ ವಿಧಾನಸೌಧ (reporterkarnataka.com):- ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ lಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು.
ಆಕ್ಷೇಪಣೆ/ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದೂವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ. ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಚಿವರು ಸದನದಲ್ಲಿ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು