8:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಯಕರ್ತರು ತಮ್ಮನ್ನು ತೊಡಗಿಸಿಕೊಳ್ಳಬೇಕು: ಶಾಸಕ ರಾಜೇಶ್ ನಾಯ್ಕ್

17/09/2025, 12:27

ಬಂಟ್ವಾಳ(reporterkarnataka.com): ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರು ಸಕ್ರೀಯವಾಗಿರಬೇಕು. ಬಿಜೆಪಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ತತ್ವ ಸಿದ್ದಾಂತದ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸಕ್ರೀಯವಾಗಿದೆ. 20 ಕೋಟಿಗಿಂತಲೂ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿಯು ಜಗತ್ತಿನ ಅತೀ ದೊಡ್ಡ ಸಂಘಟಿತ ರಾಜಕೀಯ ಪಕ್ಷವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಅವರು ಮಾಣಿ ಮಹಾಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಶಕ್ತಿ ಕೇಂದ್ರದ ಪ್ರಮುಖ ಹರೀಶ್ ಕುಲಾಲ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಬಂಟ್ವಾಳ ಮಂಡಲ ಕಾರ್ಯದರ್ಶಿ ಸುದರ್ಶನ್ ಬಜ, ಮಾಣಿ ಶಕ್ತಿಕೇಂದ್ರದ ಅಧ್ಯಕ್ಷ ಅರವಿಂದ ರೈ, ಪ್ರಧಾನ ಕಾರ್ಯದರ್ಶಿ ನಾಗೇಶ ಭಂಡಾರಿ, ಮಹಿಳಾ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯೆ ಭವಾನಿ ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧನಲಕ್ಷೀ ಗಟ್ಟಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಪ್ಪ ಪೂಜಾರಿ , ವಿಕಾಸ್ ಪುತ್ತೂರು ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿ ವಿಷಯ ಮಂಡಿಸಿದರು.
ಸಮಾರೋಪ ಸಮಾರಂಭದಲ್ಲಿ ಮಂಗಳೂರು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಶುಭ ಹಾರೈಸಿದರು. ಬಿಜೆಪಿ ನಾಯಕರಾದ ಮಾಧವ ಮಾವೆ , ಮಂಡಲ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ , ಉಪಾಧ್ಯಕ್ಷ ರವೀಶ ಶೆಟ್ಟಿ, ನೇರಳಕಟ್ಟೆ ಸೊಸೈಟಿ ಅಧ್ಯಕ್ಷ ಪುಷ್ಪರಾಜ ಚೌಟ, ಅಭ್ಯಾಸ ವರ್ಗ ಸಂಚಾಲಕ ನಾರಾಯಣ ಶೆಟ್ಟಿ , ಸಹ ಸಂಚಾಲಕಿ ಸುಶೀಲಾ ಆನಂದ್ , ಬಿಜೆಪಿ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು , ಮಹಿಳಾ ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು