9:01 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

04/06/2026, 19:52

ಬೆಂಗಳೂರು(reporterkarnataka.com): ಶೀಘ್ರದಲ್ಲೇ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದು ಸಿನಿಮಾ ಮಾಡಲಿದ್ದಾರೆ ಅಂತ ಜೈಲು ಪಾಲಾಗಿರುವ ನಟ ದರ್ಶನ್ ಭರವಸೆ ಇಟ್ಟುಕೊಂಡಿದ್ದಾರೆ.

ಸದ್ಯ ಹರಿದಾಡುತ್ತಿರುವ ಹಳೆಯ ವಿಡಿಯೋ ಯಾವ ಸಂದರ್ಭದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೂ, ಅದರಲ್ಲಿ ದರ್ಶನ್ ತಮ್ಮ ಅಭಿಮಾನಿಗಳ ಬಗ್ಗೆ ಅತ್ಯಂತ ಭಾವುಕರಾಗಿ ಮಾತನಾಡಿರುವುದು ಕಾಣಿಸುತ್ತದೆ.. “ನನ್ನ ಮೇಲೆ ಇಷ್ಟೊಂದು ಪ್ರೀತಿ ಮತ್ತು ಬೆಂಬಲ ತೋರಿದ ಪ್ರತಿಯೊಬ್ಬ ಅಭಿಮಾನಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಈ ಪ್ರೀತಿಗೆ ನಾನು ಸದಾ ಋಣಿಯಾಗಿರುತ್ತೇನೆ,” ಎಂದು ದರ್ಶನ್ ಹೇಳಿರುವ ಮಾತುಗಳು ಈಗ ಅವರ ಅಭಿಮಾನಿಗಳನ್ನು ಭಾವುಕರನ್ನಾಗಿಸುತ್ತಿವೆ. ಹಲವಾರು ಜನರು ವಿ ಮಿಸ್‌ ಯೂ ಬಾಸ್‌ ಅಂತ ಕಾಮೆಂಟ್‌ ಮೂಲಕ ಪ್ರೀತಿ ತೋರುತ್ತಿದ್ದಾರೆ.

*ಗ್ಲೋಬಲ್ ಬ್ಯೂಟಿಗೆ ಸತತ ಎರಡನೇ ಬಾರಿಗೆ ಪ್ರಶಸ್ತಿ!.. ಇದರ ವಿಶೇಷತೆ ಏನು?*
‘ಕಲಾಸಿಪಾಳ್ಯ’ ರೀ-ರಿಲೀಸ್ ಮುನ್ಸೂಚನೆ! : ಇದರ ನಡುವೆ ದರ್ಶನ್ ಕೆರಿಯರ್‌ನಲ್ಲಿ ಬಿಗ್ ಬ್ಲಾಕ್‌ಬಸ್ಟರ್ ಆಗಿದ್ದ ‘ಕಲಾಸಿಪಾಳ್ಯ’ ಸಿನಿಮಾ ಮತ್ತೆ ಚಿತ್ರಮಂದಿರಗಳಲ್ಲಿ ರೀ-ರಿಲೀಸ್ ಆಗಲಿದೆ ಎಂಬ ಮಾತುಗಳು ಗಾಂಧಿನಗರದ ವಲಯದಲ್ಲಿ ಕೇಳಿಬರುತ್ತಿದೆ.. ಆದರೆ, ಈ ಕುರಿತು ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ..
ಹಾಗೆ ನೋಡಿದರೆ ನಟ ದರ್ಶನ್‌ಗೆ ಇಂತಹ ಪರಿಸ್ಥಿತಿ ಹೊಸದೇನಲ್ಲ. ಈ ಹಿಂದೆ 2011ರಲ್ಲಿ ದರ್ಶನ್ ಜೈಲಿನಲ್ಲಿದ್ದಾಗಲೇ ಬಿಡುಗಡೆಯಾಗಿದ್ದ ‘ಸಾರಥಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿ, ಸಾರ್ವಕಾಲಿಕ ದಾಖಲೆ ಬರೆದಿತ್ತು. ಈಗ ‘ಕಲಾಸಿಪಾಳ್ಯ’ ಚಿತ್ರದ ಮರು-ಬಿಡುಗಡೆಯ ಸುದ್ದಿಯು ಅದೇ ಇತಿಹಾಸ ಮತ್ತೆ ಮರುಕಳಿಸುತ್ತಾ ಎಂಬ ಕುತೂಹಲವನ್ನು ಸ್ಯಾಂಡಲ್‌ವುಡ್‌ನಲ್ಲಿ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು