12:16 PM Friday27 - December 2024
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2… 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

14/06/2024, 15:58

ಬೆಂಗಳೂರು(reporterkarnataka.com): ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ.ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ ಸತ್ಯಾಂಶ ಮರೆಮಾಚುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,‌ ಸ್ವತಃ ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುವರು. ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ ಎಂದರು.
ಸಾರ್ವಜನಿಕರು ಹೋಗಿ ದೂರು ನೀಡಲು ಆಗುತ್ತಿಲ್ಲ ಎಂಬ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಇದೆಲ್ಲವೂ ನನಗೆ ಹೊಸ ಮಾಹಿತಿ ಎಂದರು.
ದರ್ಶನ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ ಎಂದರು.
ಪ್ರಕರಣವನ್ನು ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಎಚ್ಚರಿಕೆ ಬಗ್ಗೆ ಕೇಳಿದಾಗ, “ಈಗಲೂ ಅವರು ಮಧ್ಯಪ್ರವೇಶಿಸಲಿ. ಯಾರು ಬೇಕಾದರೂ ಮಧ್ಯಪ್ರವೇಶ ಮಾಡಲಿ ಎಂದು ಶಿವಕುಮಾರ್ ಹೇಳಿದರು.
ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ. ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ. ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ‌ ಎಂದರು.
ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ. 260 ಕಿ.ಮೀ ಉದ್ಧದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ನಮ್ಮ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೇ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.
ಈ ಮಧ್ಯೆ ಕೆಲವು ಜಾಗದಲ್ಲಿ ರೈತರಿಗೆ 51 ಕೋಟಿ ನೀಡಬೇಕಾಗಿದೆ. ಈ ಪೈಕಿ 10 ಕೋಟಿ ಹಣ ನೀಡಲಾಗಿದ್ದು, 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು.
ಇನ್ನು ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿ ಇದ್ದು ಇದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರನ್ನು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಈ ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದೊಂದಿಗೆ ಇದರ ಜತೆಗೆ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ನಾವು ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಿದ್ದೇವೆ ಎಂದು ಡಿಸಿಎಂ ನುಡಿದರು.
ಪೋಕ್ಸೋ ಪ್ರಕರಣದಡಿ ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಧನಕ್ಕೆ ಕೋರ್ಟ್ ವಾರೆಂಟ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಸಭೆಯಲ್ಲಿದ್ದ ಕಾರಣ, ನನಗೆ ಹೆಚ್ಚಿನ ಮಾಹಿತಿ ಇಲ್ಲ. ಗೃಹ ಸಚಿವಾಲಯ ಈ ವಿಚಾರವನ್ನು ನಿಭಾಯಿಸಲಿದೆ” ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು