ಇತ್ತೀಚಿನ ಸುದ್ದಿ
ಸ್ಪರ್ಶ್ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್ ಕುಮಾರ್ ಚಾಲನೆ
05/11/2025, 14:20
ಬೆಂಗಳೂರು(reporterkarnataka.com): ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳ ಹಿನ್ನೆಲೆಯಲ್ಲಿ ಸುಧಾರಿತ, ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಸೇವೆಗಳನ್ನು ದಕ್ಷಿಣ ಭಾರತದಲ್ಲಿ ಒದಗಿಸುವ ನಿಟ್ಟಿನಲ್ಲಿ ಸ್ಪರ್ಶ್ ಆಸ್ಪತ್ರೆ ಸಮೂಹವು ತನ್ನ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ್ ಇನ್ಸ್ಟಿಟ್ಯೂಟ್ ಆಫ್ ಕ್ಯಾನ್ಸರ್ ಕೇರ್ (ಸ್ಪರ್ಶ್ ಕ್ಯಾನ್ಸರ್ ಚಿಕಿತ್ಸಾ ಘಟಕ) ತೆರೆದಿದ್ದು, ನಟ ಶಿವರಾಜ್ ಕುಮಾರ್ ಚಾಲನೆ ನೀಡಿದರು.
ಸ್ಪರ್ಶ್ ಆಸ್ಪತ್ರೆಯ ಯಶಸ್ವಿ ಪಯಣದಲ್ಲಿ ಈ ನೂತನ ಕ್ಯಾನ್ಸರ್ ಚಿಕಿತ್ಸಾ ಸಂಸ್ಥೆಯು ಮತ್ತೊಂದು ಮೈಲಿಗಲ್ಲಾಗಿದೆ. ಸುಧಾರಿತ ವೈದ್ಯಕೀಯ ತಂತ್ರಜ್ಞಾನ, ಬಹು ವಿಭಾಗೀಯ ತಜ್ಞರು ಹಾಗೂ ಸಹಾನುಭೂತಿಯೊಂದಿಗಿನ ಆರೈಕೆಯ ಮೂಲಕ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಕ್ಯಾನ್ಸರ್ ಆರೈಕೆಯ ನಿಟ್ಟಿನಲ್ಲಿ ಸ್ಪರ್ಶ್ ಆಸ್ಪತ್ರೆಯ ಬದ್ಧತೆಗೆ ಸಾಕ್ಷಿಯಾಗಲಿದೆ.













