12:03 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಮೂವರು ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ದಂಗಾದ ಪೊಲೀಸರು!

20/06/2026, 19:42

ಬೆಂಗಳೂರು(reporterkarnataka.com): ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ವೈರಲ್ ಮಾಡಿದ್ದ ಸೈಬರ್ ಅಪರಾಧಿಗಳನ್ನು ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದು, ಆರೋಪಿಗಳ ಆಘಾತಕಾರಿ ಹಿನ್ನೆಲೆ ಈಗ ಬೆಳಕಿಗೆ ಬಂದಿದೆ.ಬಂಧಿತರೆಲ್ಲರೂ ಸುಶಿಕ್ಷಿತರು ಮತ್ತು ಸಮಾಜದಲ್ಲಿ ಒಳ್ಳೆಯ ಹುದ್ದೆಯಲ್ಲಿದ್ದವರಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಬಾಗಲಕೋಟೆ ನಿವಾಸಿ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ರಂಜಿತ್ ಕುಮಾರ್ (25) ಮತ್ತು ಮೂಲತಃ ತೀರ್ಥಹಳ್ಳಿಯವರಾಗಿದ್ದು ಬೆಂಗಳೂರಿನಲ್ಲಿ ವಾಸವಿದ್ದ ಚಂದ್ರಕಾಂತ್ (33) ಎಂದು ಗುರುತಿಸಲಾಗಿದೆ. ಒಬ್ಬರ ಹಿನ್ನಲೆ ನೋಡಿ ಪೊಲೀಸರಿಗೆ ಶಾಕ್ ಆಗಿದೆ. ಈ ಪ್ರಕರಣದ ಮೊದಲ ಆರೋಪಿ ರವಿ ಕುಮಾರ್ ಬಿಎಸ್‌ಸಿ ನರ್ಸಿಂಗ್ ಮುಗಿಸಿ ತನ್ನದೇ ಆದ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದನು. ಇತ್ತೀಚೆಗಷ್ಟೇ ಯೂಟ್ಯೂಬ್‌ನಿಂದ ಮೊದಲ ಗಳಿಕೆ (ಹಣ) ಪಡೆದಿದ್ದ ಈತನಿಗೆ ಸುಲಭವಾಗಿ ಹಣ ಸಂಪಾದಿಸುವ ಆಸೆ ಹುಟ್ಟಿತ್ತು. ಅಂದಿನಿಂದ ವೀಕ್ಷಣೆ (Views) ಹೆಚ್ಚಿಸಿಕೊಳ್ಳಲು ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಮಾಡಿ ಅಪ್ಲೋಡ್ ಮಾಡಲು ಶುರು ಮಾಡಿದ್ದನು ಎಂದು ಹೇಳಲಾಗಿದೆ.
ಇನ್ನು ಎರಡನೇ ಆರೋಪಿ ರಂಜಿತ್ ಕುಮಾರ್, ವಾರ್ಷಿಕ 20 ಲಕ್ಷ ರೂಪಾಯಿ ಭಾರಿ ಸಂಬಳದ ಪ್ಯಾಕೇಜ್ ಹೊಂದಿದ್ದ ಈತ ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ತಂತ್ರಜ್ಞಾನದ ಜ್ಞಾನವಿದ್ದ ಈತ ಕೇವಲ ‘ಫನ್’ (ವಿನೋದ) ಮತ್ತು ಮಜಾ ಮಾಡಲು ಎಲ್ಲಾ ಪ್ರಮುಖ ನಟಿಯರ ಎಐ ಡೀಪ್‌ಫೇಕ್ ವಿಡಿಯೋಗಳನ್ನು ತಯಾರಿಸುತ್ತಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಇನ್ನೊಬ್ಬ ಆರೋಪಿ ಚಂದ್ರಕಾಂತ್ ಈತ ಬೆಂಗಳೂರಿನ ಪ್ರತಿಷ್ಠಿತ ಚಾರ್ಟೆಡ್ ಅಕೌಂಟೆಂಟ್ (CA) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಒಳ್ಳೆಯ ಸಂಬಳ ಪಡೆಯುತ್ತಿದ್ದನು. ಕೇವಲ ವಿಕೃತ ಸಂತೋಷ ಮತ್ತು ಮಜಾ ತೆಗೆದುಕೊಳ್ಳಲು ನಟಿಯರ ಫೋಟೋಗಳನ್ನು ಡೀಪ್‌ಫೇಕ್ ಮಾಡುತ್ತಿದ್ದಾಗಿ ಈತನೂ ತಪ್ಪೊಪ್ಪಿಕೊಂಡಿದ್ದಾನೆ.
ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮೂರು ಹೈ-ಎಂಡ್ ಮೊಬೈಲ್ ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಎಐ ಆಪ್ ಮತ್ತು ಸಾಫ್ಟ್‌ವೇರ್‌ಗಳನ್ನು ಬಳಸಿ ನಟಿಯರ ಮುಖವನ್ನು ಅಶ್ಲೀಲ ವಿಡಿಯೋಗಳಿಗೆ ಎಡಿಟ್ ಮಾಡುತ್ತಿದ್ದರು. ಸದ್ಯ ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಸೈಬರ್ ಕಮಾಂಡ್ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದು ತೀವ್ರ ತನಿಖೆ ನಡೆಸುತ್ತಿದ್ದಾರೆ. ಸುಶಿಕ್ಷಿತರೇ ಇಂತಹ ಸೈಬರ್ ವಿಕೃತಿಯಲ್ಲಿ ತೊಡಗಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು