7:47 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಆಡಳಿತರೂಢ ಬಿಜೆಪಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ: ಸಿಂದಗಿಯಲ್ಲಿ ಕೇಸರಿಗೆ ಗೆಲುವು; ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯ

02/11/2021, 16:03

ಬೆಂಗಳೂರು(reporterkarnataka.com): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಒಂದೆಡೆ ಖುಷಿಯಾದರೆ ಇನ್ನೊಂದೆಡೆ ದುಃಖದ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೊದಲ ಅಗ್ನಿಪರೀಕ್ಷೆ ಇದಾಗಿತ್ತು.

ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸಿದರೆ, ಹಾನಗಲ್ ಕ್ಷೇತ್ರದಲ್ಲಿ ಕೇಸರಿ ಪಕ್ಷ ಕಾಂಗ್ರೆಸ್ ಎದುರು ಸೋಲು ಅನುಭವಿಸಿದೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ.

ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದರು.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ ಅವರು ಕಾಂಗ್ರೆಸ್ ಶ್ರೀನಿವಾಸ್ ಮಾನೆ ಎದುರು ಸೋಲು ಅನುಭವಿಸಿದ್ದಾರೆ. ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು