11:21 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಆಡಳಿತದಲ್ಲಿ ನೂತನ ತಂತ್ರಜ್ಞಾನ ಮೂಲಕ ದೇಶದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ:  ಬರ್ಲಿನ್ ನಲ್ಲಿ ಪ್ರಧಾನಿ ಮೋದಿ

03/05/2022, 16:27

ಬರ್ಲಿನ್(reporterkarnataka.com): 

ಆಡಳಿತದಲ್ಲಿ ನೂತನ ತಂತ್ರಜ್ಞಾನಗಳನ್ನು ಸೇರಿಸಿಕೊಂಡು ಉತ್ತಮ ಆಡಳಿತ ನೀಡುವ ಮೂಲಕ ದೇಶದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯಾಗುತ್ತಿದೆ ಎಂದು ಪ್ರಧಾನ ನರೇಂದ್ರ ಮೋದಿ ಹೇಳಿದ್ದಾರೆ.

ಯುರೋಪಿಯನ್‌ ಯೂನಿಯನ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬರ್ಲಿನ್‌ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು.

2021ರಲ್ಲಿ ಪ್ರಪಂಚದಾದ್ಯಂತ ನಡೆದ ಒಟ್ಟೂ ಡಿಜಿಟಲ್‌ ಪಾವತಿಗಳಲ್ಲಿ 40% ದಷ್ಟು ಭಾರತದಲ್ಲೇ ಆಗಿದೆ. ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಯ ಮೂಲಕ ಭ್ರಷ್ಟಾಚಾರವನ್ನು ಪರಿಣಾಮಾತ್ಮಕಾವಾಗಿ ಕಡಿತ ಗೊಳಿಸಲಾಗಿದೆ. ಕಳೆದ 7-8 ವರ್ಷಗಳಲ್ಲಿ ಭಾರತವು ನೇರ ವರ್ಗಾವಣೆ (DBT) ಮೂಲಕ 22 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ವರ್ಗಾಯಿಸಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ ಈ ಮೊತ್ತವು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ತಲುಪಿದೆ ಎಂದು ಪ್ರಧಾನಿ ನುಡಿದರು.

ತಂತ್ರಜ್ಞಾನವನ್ನು ಆಡಳಿತದಲ್ಲಿ ಸಮರ್ಪಕವಾಗಿ ಬಳಸಿಕೊಂಡಿರುವುದು ನವ ಭಾರತದ ಹೊಸ ರಾಜಕೀಯ ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದ ಅವರು “ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಸ್ಥಳೀಯ ಸ್ವಯಂ ಸರ್ಕಾರದ ಸುಮಾರು 10,000 ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಸರ್ಕಾರದ ನೆರವು, ವಿದ್ಯಾರ್ಥಿವೇತನ, ರೈತರಿಗೆ ಪಾವತಿಗಳು ಎಲ್ಲವೂ ಕೂಡ ಆನ್‌ ಲೈನ್‌ ನಲ್ಲಿ ನೇರವಾಗಿ ಪಾವತಿಸಲಾಗಿದೆ. ಈಗ ಸರ್ಕಾರದಿಂದ 1 ರೂ ಪಾವತಿಸಿದರೆ 15 ಪೈಸೆ ಮಾತ್ರ ಜನರಿಗೆ ಸೇರುತ್ತದೆ ಎಂದು ಹೇಳುವ ದುಸ್ಥಿತಿಯಿಲ್ಲ”.

“2014ರ ನಂತರ ಅಭಿವೃದ್ಧಿಯ ಹೊಸ ಶಕೆ ಪ್ರಾರಂಭವಾಗಿದೆ. ದೇಶದಲ್ಲಿ ದಾಖಲೆ ಸಂಖ್ಯೆಯ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ. ಬೃಹತ್‌ ಪ್ರಮಾಣದಲ್ಲಿ ಮೆಟ್ರೊ ನಿರ್ಮಾಣ ಮಾಡಲಾಗುತ್ತಿದೆ. ಆಪ್ಟಿಕಲ್ ಫೈಬರ್ ನೆಟ್‌ವರ್ಕ್‌ನೊಂದಿಗೆ ಹಳ್ಳಿ-ಹಳ್ಳಿಗಳನ್ನೂ ಸಂಪರ್ಕಿಸಲಾಗುತ್ತಿದೆ. ಸರ್ಕಾರಿ ಇಲಾಖೆಗಳು ಮತ್ತು ಎಲ್ಲಾ ಪಾಲುದಾರರ ನಡುವೆ ಸಮನ್ವಯ ಸಾಧಿಸುವುದಕ್ಕಾಗಿ ಎಲ್ಲರನ್ನೂ ಒಂದೇ ವೇದಿಕೆಗೆ ತರಲು ಪಿಎಂ ಗತಿ ಶಕ್ತಿ ಎಂಬ ಮಾಸ್ಟರ್‌ ಪ್ಲ್ಯಾನ್‌ ಮಾಡಲಾಗಿದೆ. ಇದರಿಂದ ಹೊಸದಾಗಿ ನಿರ್ಮಾಣ ಮಾಡಿದ ರಸ್ತೆಯನ್ನು ಒಮ್ಮೆ ವಿದ್ಯುತ್‌ ಗೋಸ್ಕರ ಮತ್ತೊಮ್ಮೆ ನೀರಿಗೋಸ್ಕರ ಮತ್ತೆ ಅಗೆಯುವಂತಹ ಪ್ರಸಂಗ ಬರದಂತೆ ತಡೆಯಲಾಗುತ್ತದೆ. ಸರ್ವಾಂಗೀಣ ಅಭಿವೃದ್ಧಿಯತ್ತ ಗಮನ ಹರಿಸಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು