ಇತ್ತೀಚಿನ ಸುದ್ದಿ
ಆಧಾರ್ ಕಾರ್ಡ್ ಇದ್ದರೆ ಸಾಕು ನಿಮ್ಮ ಮನೆಗೆ ನಳ್ಳಿ ನೀರು ಸೌಲಭ್ಯ!: ರಾಜ್ಯ ಸರಕಾರದಿಂದ ಹೊಸ ಯೋಜನೆ
02/12/2022, 14:06

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ.
ನಷ್ಟ ಭರ್ತಿ ಮುಚ್ಚಳಿಕೆಯನ್ನು ನಿಗದಿತ ನಮೂನೆಗಳಲ್ಲಿ 50 ರೂ. ಸ್ಟಾಂಪ್ ಪೇಪರ್ ನಲ್ಲಿ ವಿಳಾಸದ ಪುರಾವೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಲೀಕತ್ವ ಇಲ್ಲದವರು ನಗರ ಸ್ಥಳೀಯ ಸಂಸ್ಥೆಗೆ ಯಾವುದೇ ನಷ್ಟ ಉಂಟಾದರೆ ಅರ್ಜಿದಾರರೇ ಆ ನಷ್ಟವನ್ನು ಭರ್ತಿ ಮಾಡುತ್ತೇವೆಂದು ಮುಚ್ಚಳಿಕೆ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.