6:00 PM Friday4 - October 2024
ಬ್ರೇಕಿಂಗ್ ನ್ಯೂಸ್
ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ ಶ್ರೀನಿವಾಸಪುರ ವಿದ್ಯಾರ್ಥಿಗಳ ವಸತಿ ನಿಲಯ ದುರವಸ್ಥೆ: ಉಪ ಲೋಕಾಯುಕ್ತರು ಗರಂ; ಸರಕಾರಿ ಆಸ್ಪತ್ರೆಗೂ… ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೊದಲ ಪದವಿ ಪ್ರದಾನ; 23 ಮಂದಿ ವಿದ್ಯಾರ್ಥಿಗಳಿಗೆ… ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ

ಇತ್ತೀಚಿನ ಸುದ್ದಿ

ಆದರ್ಶ ಶಿಕ್ಷಕರಾದಾಗ ಮಾತ್ರ ಗುರು ಭಕ್ತಿಗೆ ಗೌರವ: ಶಾಸಕ ದರ್ಶನ್ ಧ್ರುವನಾರಾಯಣ್

06/09/2024, 20:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದೇಶದಲ್ಲಿ ಡಾ.ರಾಧಾಕೃಷ್ಣನ್ ರವರು ರಾಷ್ಟ್ರಪತಿಗಳಾಗಿ ಉತ್ತಮ ಸೇವೆ ಸಲ್ಲಿಸಿ ಶಿಕ್ಷಕರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತಿದೆ. ಅವರಿಗೆ ಪ್ರತಿಯೊಬ್ಬರು ಗೌರವವನ್ನು ಸಲ್ಲಿಸಿ ಅವರ ಕೊಡುಗೆಗಳನ್ನು ಸ್ಮರಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.


ಅವರು ನಂಜನಗೂಡಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ, ಡಾ. ಸರ್ವಪಲ್ಲಿ ರಾಧಾಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ನಾನು ವಕೀಲನಾಗಿ, ಶಾಸಕನಾಗಿ ನಿಂತಿದ್ದೇನೆ ಎಂದರೆ ಅದಕ್ಕೆ ಶಿಕ್ಷಕರೇ ಪ್ರಮುಖ ಕಾರಣರಾಗಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳ ಬಾಳಿಗೆ ಬೆಳಕನ್ನು ನೀಡುತ್ತಿರುವುದು ಶಿಕ್ಷಕರು ಮಾತ್ರ. ಮಕ್ಕಳು ಅವರ ಪೋಷಕರ ಜೊತೆ ಇರುವುದಕ್ಕಿಂತ ಶಿಕ್ಷಕರ ಜೊತೆಗೆ ಇರುವುದನ್ನು ಹೆಚ್ಚಾಗಿ ನಾವು ಕಾಣಬಹುದು. ಪ್ರತಿಯೊಬ್ಬ ಶಿಕ್ಷಕರು ಆದರ್ಶ ಶಿಕ್ಷಕರಾಗಿ ಸೇವೆ ಸಲ್ಲಿಸಿದಾಗ ಮಾತ್ರ ಶಿಕ್ಷಣಕ್ಕೆ ಮತ್ತು ಗುರುಗಳಿಗೆ ಗೌರವ ಲಭಿಸಲಿದೆ ಎಂದು ಹೇಳಿದರು.
ಓಪಿಎಸ್ ಕೇಳುವುದು ಶಿಕ್ಷಕರ ಹಕ್ಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಓಪಿಎಸ್ ಜಾರಿಯಾಗಲಿದೆ. ಹಾಗೆ ನಂಜನಗೂಡು ಪಟ್ಟಣದಲ್ಲಿ ಗುರುಭವನ ನಿರ್ಮಾಣ ಮಾಡಲು ಈಗಾಗಲೇ 5 ಕೋಟಿ ರೂ.ಅನುದಾನವನ್ನು ನೀಡಲಾಗಿದೆ. ಮತ್ತೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಇನ್ನು ಹೆಚ್ಚಿನ ಅನುದಾನವನ್ನು ತಂದು ಉತ್ತಮವಾಗಿ ಗುರುಭವನದ ಕಟ್ಟಡವನ್ನು ನಿರ್ಮಾಣ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.
ತಾಲೂಕಿನಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಪಡೆದ ನಿವೃತ್ತ ಶಿಕ್ಷಕರಿಗೆ ಗೌರವಿಸಲಾಯಿತು. ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪಡೆದ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಶ್ರೀಕಂಠ ಸ್ವಾಮಿ, ನಗರಸಭಾ ಉಪಾಧ್ಯಕ್ಷೆ ರಿಹಾನ ಬಾನು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖ್ಯ ಭಾಷಣಕಾರ ರಾಮಮೋಹನ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಹೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಬಾಲರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮ ರತ್ನಾಕರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರ ಸೇರಿದಂತೆ ಶಿಕ್ಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು