5:20 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಆದಾಯ ತೆರಿಗೆ ಇಲಾಖೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯವಾದಿ ಬೆಳ್ತಂಗಡಿಯ ಹರ್ಷ ಕುಮಾರ್‌ ನೇಮಕ

10/07/2024, 16:37

ಮಂಗಳೂರು(reporterkarnataka.com): ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್‌ ಅವರು ನೇಮಕವಾಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸೂಚನೆಯ ಮೇರೆಗೆ ಭಾರತ ಸರ್ಕಾರ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹರ್ಷ ಕುಮಾರ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿದೆ.
ಆದಾಯ ತೆರಿಗೆ ಇಲಾಖೆಯ ಮಂಗಳೂರು ವಿಭಾಗದ ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ಪ್ರಕರಣಗಳಲ್ಲಿ ಹರ್ಷ ಕುಮಾರ್ ಅವರು ಆದಾಯ ತೆರಿಗೆ ಇಲಾಖೆಯನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರತಿನಿಧಿಸಲಿದ್ದಾರೆ.
ಮೂಲತಃ ಬೆಳ್ತಂಗಡಿಯ ಪಡಂಗಡಿಯ ನಡಿಬೆಟ್ಟು ಮನೆತನದವರಾದ ಹರ್ಷ ಕುಮಾರ್ ಮಂಗಳೂರು ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹರ್ಷ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು