3:43 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಆದಾಯಕ್ಕಿಂತ ಹೆಚ್ಚಿನ ಸಂಪಾದನೆ: ಪಾಲಿಕೆ ಸಹಾಯಕ ನಗರ ಯೋಜನಾಧಿಕಾರಿ ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ, 35 ಲಕ್ಷ ದಂಡ

28/10/2021, 23:32

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ ನ್ಯಾಯಾಲಯದ ತೀರ್ಪಿನ ಮೂಲಕ ಒಂದೊಂದಾಗಿ ಹೊರಬರುತ್ತಿದೆ. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಇಂತಹದ್ದೇ ಪ್ರಕರಣದಲ್ಲಿ ಪಾಲಿಕೆಯ ಅಸಿಸ್ಟೆಂಟ್ ಟೌನ್ ಪ್ಲಾನಿಂಗ್ ಆಫೀಸರ್ ಶಿವರಾಜ್ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೀಗ ಆದಾಯಕ್ಕಿಂತ ಹೆಚ್ಚು ಸಂಪಾದನೆ ಆರೋಪದ ಮೇಲೆ ಮಂಜುನಾಥ ಸ್ವಾಮಿಗೆ ಸಜೆ ನೀಡಲಾಗಿದೆ.

ಆದಾಯಕ್ಕಿಂತ ಹೆಚ್ಚಿನ ಸಂಪಾನೆಯ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಲೋಕಾ ಯುಕ್ತ ಪೊಲೀಸರು 2007ರಲ್ಲಿ ಮಂಜುನಾಥ ಸ್ವಾಮಿ ಅವರ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕುರಿತು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿದ್ದರು. ಇದೀಗ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪುನಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ. ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು