9:09 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಆದಾಯಕ್ಕಿಂತ ಹೆಚ್ಚಿನ ಸಂಪಾದನೆ: ಪಾಲಿಕೆ ಸಹಾಯಕ ನಗರ ಯೋಜನಾಧಿಕಾರಿ ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ, 35 ಲಕ್ಷ ದಂಡ

28/10/2021, 23:32

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ ನ್ಯಾಯಾಲಯದ ತೀರ್ಪಿನ ಮೂಲಕ ಒಂದೊಂದಾಗಿ ಹೊರಬರುತ್ತಿದೆ. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಇಂತಹದ್ದೇ ಪ್ರಕರಣದಲ್ಲಿ ಪಾಲಿಕೆಯ ಅಸಿಸ್ಟೆಂಟ್ ಟೌನ್ ಪ್ಲಾನಿಂಗ್ ಆಫೀಸರ್ ಶಿವರಾಜ್ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೀಗ ಆದಾಯಕ್ಕಿಂತ ಹೆಚ್ಚು ಸಂಪಾದನೆ ಆರೋಪದ ಮೇಲೆ ಮಂಜುನಾಥ ಸ್ವಾಮಿಗೆ ಸಜೆ ನೀಡಲಾಗಿದೆ.

ಆದಾಯಕ್ಕಿಂತ ಹೆಚ್ಚಿನ ಸಂಪಾನೆಯ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಲೋಕಾ ಯುಕ್ತ ಪೊಲೀಸರು 2007ರಲ್ಲಿ ಮಂಜುನಾಥ ಸ್ವಾಮಿ ಅವರ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕುರಿತು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿದ್ದರು. ಇದೀಗ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪುನಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ. ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು